ಶಿವಮೊಗ್ಗ: ವೈದ್ಯೆಯ ಕಿರುಕುಳಕ್ಕೆ ಬೇಸತ್ತು ನರ್ಸ್ ಓರ್ವರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿಯ ಬಿಆರ್ ಪಿ ಸರ್ಕಾರಿ ಆಸ್ಪತ್ರೆಯಲ್ಲಿ ನಡೆದಿದೆ.
ವಿಷ ಸೇವಿಸಿ ತೀವ್ರ ಅಸ್ವಸ್ಥರಾಗಿದ್ದ ನರ್ಸ್ ಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸುಕನ್ಯಾ ಆತ್ಮಹತ್ಯೆಗೆ ಯತ್ನಿಸಿದ ನರ್ಸ್. ವೈದ್ಯೆ ಡಾ.ಹಂಸವೇಣಿ ವಿರುದ್ಧ ಕಿರುಕುಳ ಆರೋಪ ಮಾಡಿರುವ ಸುಕನ್ಯಾ, ವೈದ್ಯೆ ಮಾನಸಿಕ ಹಿಂಸೆ ನೀಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಅವರ ಕಿರುಕುಳಕ್ಕೆ ಮನನೊಂದು ಆತ್ಮಹತ್ಯೆಗೆ ಯತ್ನಿಸಿದ್ದಾರೆ.
ತನ್ನ ವಿರುದ್ಧ ಆರೋಪ ಮಾಡಿ ನರ್ಸ್ ಆತ್ಮಹಯೆಗೆ ಯತ್ನಿಸಿದ ವಿಷಯ ತಿಳಿಯುತ್ತಿದಂತೆ ವೈದ್ಯೆ ಹಂಸವೇಣಿ ಕೂಡ ಆತ್ಮಾತ್ಯೆಗೆ ಯತ್ನಿಸಿದ್ದರು ಎನ್ನಲಾಗಿದೆ. ಸರ್ಕಾರಿ ಆಸ್ಪತ್ರೆಯಲ್ಲಿಯೇ ನಡೆದ ಈ ಘಟನೆ ಅಚ್ಚರಿಗೆ ಕಾರಣವಾಗಿದ್ದು, ಜಿಲ್ಲಾ ಆರೋಗ್ಯಾಧಿಕಾರಿ ಘಟನೆ ಬಗ್ಗೆ ತನಿಖೆ ನಡೆಸುವುದಾಗಿ ತಿಳಿಸಿದ್ದಾರೆ.