ಬೆಂಗಳೂರು: ಸಾಫ್ಟ್ ವೇರ್ ಇಂಜಿನಿಯರ್ ಆಗಿದ್ದ ಯುವತಿಯೊಬ್ಬಳು ಪೆಟ್ರೋಲ್ ಸುರಿದುಕೊಂದು ಆತ್ಮಹತ್ಯೆ ಮಾಡಿಕೊಂಡಿರುವ ಘೋರ ಘಟನೆ ಬೆಂಗಳೂರಿನ ಹೆಚ್ ಎ ಎಲ್ ವ್ಯಾಪ್ತಿಯಲ್ಲಿ ನಡೆದಿದೆ.
ಸುಹಾಸಿ ಸಿಂಗ್ ಆತ್ಮಹತ್ಯೆಗೆ ಶರಣಾಗಿರುವ ಯುವತಿ. ಜನವರಿ 12ರಂದು ಯುವತಿ ಹೋಟೆಲ್ ಒಂದರಲ್ಲಿ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಳು. ಗಂಭೀರ ಸ್ಥಿತಿಯಲ್ಲಿದ್ದ ಯುವತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಯುವತಿ ಸಾವನ್ನಪ್ಪಿದ್ದಾಳೆ.
ಯುವತಿಯ ಖಾಸಗಿ ವಿಡಿಯೋ ಲೀಕ್ ಮಾಡುವುದಾಗಿ ಬೆದರಿಕೆ ಹಾಕಿದ್ದ ಹಿನ್ನಲೆಯಲ್ಲಿ ಯುವತಿ ಆತ್ಮಹತ್ಯೆಗೆ ಶರಣಾಗಿದ್ದಾಳೆ ಎನ್ನಲಾಗಿದೆ. ಟೆಕ್ಕಿ ಯುವತಿ ಆತ್ಮಹತ್ಯೆ ಪ್ರಕರಣ ಸಂಬಂಧ ಯುವತಿಯ ಸಂಬಂಧಿ ಪ್ರವೀಣ್ ಸಿಂಗ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.