ಪಡಿತರ ಚೀಟಿ ಹೊಂದಿದವರೆಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ಪಡಿತರ ಚೀಟಿಯಲ್ಲಿ ಹೆಸರು ಸೇರ್ಪಡೆ ಮತ್ತು ತಿದ್ದುಪಡಿಗೆ ಅವಕಾಶ ಕಲ್ಪಿಸಲಾಗಿದೆ.
ಉಡುಪಿ ಜಿಲ್ಲೆಯಲ್ಲಿನ ಅಂತ್ಯೋದಯ ಅನ್ನ ಯೋಜನೆ, ಆದ್ಯತಾ ಪಡಿತರ ಚೀಟಿಗಳಿಗೆ ಮತ್ತು ಆದ್ಯತೇತರ ಪಡಿತರ ಚೀಟಿಗಳಿಗೆ ಕುಟುಂಬ ಸದಸ್ಯರನ್ನು ಸೇರ್ಪಡೆ ಮಾಡಲು, ತಿದ್ದುಪಡಿ, ವಿಳಾಸ ಬದಲಾವಣೆ, ಹೆಸರು ತೆಗೆದುಹಾಕುವ ಬಗ್ಗೆ ಗ್ರಾಮ ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಜನವರಿ 31 ರವರೆ ಗೆ ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಅವಕಾಶ ಕಲ್ಪಿಸಲಾಗಿದೆ.
ಸಾರ್ವಜನಿಕರು ಪಡಿತರ ಚೀಟಿಯಲ್ಲಿ ಹೆಸರು ಸೇರ್ಪಡೆ, ತಿದ್ದುಪಡಿ, ವಿಳಾಸ ಬದಲಾವಣೆ, ಹೆಸರು ತೆಗೆದು ಹಾಕುವ ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳುವಂತೆ ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ತಿಳಿಸಿದ್ದಾರೆ.