ಆಂಧ್ರಪ್ರದೇಶದಲ್ಲಿ ಟೂರಿಸ್ಟ್ ಬಸ್ ಪಲ್ಟಿಯಾಗಿ ನಾಲ್ವರು ಸಾವನ್ನಪ್ಪಿದ್ದಾರೆ. ಚಿತ್ತೂರು ಸಮೀಪದ ಗಂಗಾಸಾಗರಂ ಗ್ರಾಮದ ಬಳಿ ಘಟನೆ ನಡೆದಿದೆ.
ಬಸ್ ಪಲ್ಟಿಯಾಗಿ ನಾಲ್ವರು ಮೃತಪಟ್ಟಿದ್ದು, 22 ಜನ ಗಾಯಗೊಂಡಿದ್ದಾರೆ. ತಿರುಪತಿಯಿಂದ ತಮಿಳುನಾಡಿನ ತಿರುಚ್ಚಿಗೆ ತೆರಳುತ್ತಿದ್ದ ಬಸ್ ಟಿಪ್ಪರ್ ಲಾರಿ ತಪ್ಪಿಸಲು ಹೋಗಿ ಪಲ್ಟಿಯಾಗಿ ದುರಂತ ಸಂಭವಿಸಿದೆ. ಹಲವು ಗಾಯಾಳುಗಳನ್ನು ಚಿತ್ತೂರು ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ತೀವ್ರವಾಗಿ ಗಾಯಗೊಂಡವರನ್ನು ವೇಲೂರು ಆಸ್ಪತ್ರೆಗೆ ದಾಖಲಿಸಲಾಗಿದೆ.