ಬೆಂಗಳೂರು : ಬೆಂಗಳೂರಿನ ಲಾಲ್’ಬಾಗ್ ನಲ್ಲಿ ಜನವರಿ 27ರ ವರೆಗೆ ಆದಿಕವಿ ಮಹರ್ಷಿ ವಾಲ್ಮೀಕಿ ವಿಷಯ ಆಧಾರಿತ ಗಣರಾಜ್ಯೋತ್ಸವ ಫಲಪುಷ್ಪ ಪ್ರದರ್ಶನವನ್ನು ಆಯೋಜಿಸಲಾಗಿದೆ.
ಬೆಳಗ್ಗೆ 6 ರಿಂದ ಸಂಜೆ 6.30ರ ವರೆಗೆ ಪ್ರದರ್ಶನ ವೀಕ್ಷಿಸಲು ಅವಕಾಶ ಕಲ್ಪಿಸಲಾಗಿದೆ. ಶಾಲಾ ಸಮವಸ್ತ್ರದಲ್ಲಿ ಬರುವ ಮಕ್ಕಳಿಗೆ ಉಚಿತ ಪ್ರವೇಶವಿರುತ್ತದೆ.
ಪ್ರದರ್ಶನದ ಸಮಯ
ಬೆಳಗ್ಗೆ 6 ರಿಂದ ಸಂಜೆ 6.30ರ ವರೆಗೆ
ಪ್ರವೇಶ ಶುಲ್ಕ
• ವಯಸ್ಕರಿಗೆ ₹80
• ರಜೆ ದಿನಗಳಲ್ಲಿ ₹100
• ಮಕ್ಕಳಿಗೆ ₹30
• ಸಮವಸ್ತ್ರಧರಿಸಿ ಬರುವ ಶಾಲಾ ವಿದ್ಯಾರ್ಥಿಗಳಿಗೆ ಪ್ರವೇಶ ಉಚಿತ
ಆದಿಕವಿ ಮಹರ್ಷಿ ವಾಲ್ಮೀಕಿ ವಿಷಯ ಆಧಾರಿತ ಗಣರಾಜ್ಯೋತ್ಸವ ಫಲಪುಷ್ಪ ಪ್ರದರ್ಶನವು ಲಾಲ್ಬಾಗ್ನಲ್ಲಿ ಇಂದಿನಿಂದ ಜನವರಿ 27ರವರೆಗೆ ನಡೆಯಲಿದೆ. ಸುಮಾರು ₹2.75 ಕೋಟಿ ವೆಚ್ಚದಲ್ಲಿ ಫಲಪುಷ್ಪ ಪ್ರದರ್ಶನವನ್ನು ಆಯೋಜಿಸಲಾಗಿದೆ. ತೋಟಗಾರಿಕೆ ಇಲಾಖೆ ಹಮ್ಮಿಕೊಂಡಿರುವ 217 ನೇ ಫಲಪುಷ್ಪ ಪ್ರದರ್ಶನ ಇದಾಗಿದ್ದು, ಸುಮಾರು 30 ಲಕ್ಷ ಹೂಗಳನ್ನು ಪ್ರದರ್ಶನದಲ್ಲಿ ಬಳಕೆ ಮಾಡಲಾಗುತ್ತಿದೆ.
ಲಾಲ್ಬಾಗ್ನಲ್ಲಿ ಇಂದಿನಿಂದ ಜನವರಿ 27ರ ವರೆಗೆ ಆದಿಕವಿ ಮಹರ್ಷಿ ವಾಲ್ಮೀಕಿ ವಿಷಯ ಆಧಾರಿತ ಗಣರಾಜ್ಯೋತ್ಸವ ಫಲಪುಷ್ಪ ಪ್ರದರ್ಶನವನ್ನು ಆಯೋಜಿಸಲಾಗಿದೆ. ಬೆಳಗ್ಗೆ 6 ರಿಂದ ಸಂಜೆ 6.30ರ ವರೆಗೆ ಪ್ರದರ್ಶನ ವೀಕ್ಷಿಸಲು ಅವಕಾಶ ಕಲ್ಪಿಸಲಾಗಿದೆ. ಶಾಲಾ ಸಮವಸ್ತ್ರದಲ್ಲಿ ಬರುವ ಮಕ್ಕಳಿಗೆ ಉಚಿತ ಪ್ರವೇಶವಿರುತ್ತದೆ.#Lalbagh #FlowerShow pic.twitter.com/iotPjxSfaw
— DIPR Karnataka (@KarnatakaVarthe) January 16, 2025