ನವದೆಹಲಿ: 2022ರಲ್ಲಿ ಪಂಜಾಬ್ ನಲ್ಲಿ ಪ್ರಧಾನಿ ನರೇಂದ್ರ ಮೋದಿ ಪ್ರಯಾಣದ ವೇಳೆ ಸಂಭವಿಸಿದ್ದ ಭದ್ರತಾ ಲೋಪ ಪ್ರಕರಣಕ್ಕೆ ಸಂಬಂಧಿಸಿದಂತೆ 25 ರೈತರ ವಿರುದ್ಧ ಬಂಧನ ವಾರೆಂಟ್ ಜಾರಿ ಮಾಡಲಾಗಿದೆ ಎಂದು ಭಾರತೀಯ ಕಿಸಾನ್ ಯೂನಿಯನ್ (ಕ್ರಾಂತಿಕಾರಿ) ಆರೋಪಿಸಿದೆ.
ಈ ಬಗ್ಗೆ ಮಾತನಾಡಿರುವ ಕಿಸಾನ್ ಯೂನಿಯನ್ ಅಧ್ಯಕ್ಷ ಬಲದೇವ್ ಸಿಂಗ್ ಝಿರಾ, ರೈತರೊಬ್ಬರ ಜಾಮೀನು ಅರ್ಜಿಯನ್ನು ಫಿರೋಜ್ ಪುರದ ನ್ಯಾಯಾಲಯ ತಿರಸ್ಕರಿಸಿದೆ. ಈ ವೇಳೆ ಎಫ್ ಐ ಆರ್ ನಲ್ಲಿ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 307 (ಕೊಲೆ ಯತ್ನ) ನಮೂದಿಸಿರುವ ವಿಚಾರ ಬೆಳಕಿಗೆ ಬಂದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಘಟನೆ ನಡೆದು ಮೂರು ವರ್ಷ ಕಳೆದಿದೆ. ರಾಜ್ಯ ಸರ್ಕಾರ ಕೇಂದ್ರದ ಒತ್ತಡಕ್ಕೆ ಮಣಿದು ಕೆಲಸ ಮಾಡುತ್ತಿದೆ ಎಂದು ಕಿಡಿಕಾರಿದ್ದಾರೆ. ಪ್ರತಿಭಟನೆ ನಡೆಸಲು ರೈತರು ಜಿಲ್ಲಾಡಳಿತದತ್ತ ತೆರಳುತ್ತಿದ್ದರು. ಇದೇ ವೇಳೆ ಪ್ರಧಾನಿ ಮೋದಿ ಅವರು ಅದೇ ಮಾರ್ಗದಲ್ಲಿ ಆಗಮಿಸಿದ್ದರು. ಪ್ರಧಾನಿ ಮೋದಿಯವರು ಆ ಮಾರ್ಗದಲ್ಲಿ ಬರುವ ವಿಷಯ ರೈತರಿಗೆ ಗೊತ್ತಿರಲಿಲ್ಲ ಎಂದು ಸಮರ್ಥಿಸಿಕೊಂಡರು.