ಜ.22 ರಂದು ‘ಕುವೆಂಪು ವಿಶ್ವವಿದ್ಯಾಲಯ’ದ 34ನೇ ವಾರ್ಷಿಕ ಘಟಿಕೋತ್ಸವ

ಶಿವಮೊಗ್ಗ : ಕುವೆಂಪು ವಿಶ್ವವಿದ್ಯಾಲಯದ ವತಿಯಿಂದ ಜ.22 ರ ಬೆಳಿಗ್ಗೆ 10.30 ಕ್ಕೆ ಶಂಕರಘಟ್ಟದ ಜ್ಞಾನ ಸಹ್ಯಾದ್ರಿ ಕ್ಯಾಂಪಸ್ನ ಬಸವಸಭಾ ಭವನದಲ್ಲಿ ಕುವೆಂಪು ವಿಶ್ವವಿದ್ಯಾಲಯದ 34 ನೇ ವಾರ್ಷಿಕ ಘಟಿಕೋತ್ಸವ ಏರ್ಪಡಿಸಲಾಗಿದೆ.

ರಾಜ್ಯಪಾಲರು, ಕರ್ನಾಟಕ ಹಾಗೂ ವಿಶ್ವವಿದ್ಯಾಲಯದ ಕುಲಾಧಿಪತಿಗಳಾದ ಥಾವರ್ಚಂದ್ ಗೆಹ್ಲೋಟ್ ಅಗ್ರಾಸನ ವಹಿಸಲಿದ್ದಾರೆ. ಉನ್ನತ ಶಿಕ್ಷಣ ಸಚಿವ ಹಾಗೂ ವಿಶ್ವವಿದ್ಯಾಲಯದ ಸಹ ಕುಲಾಧಿಪತಿಗಳಾದ ಡಾ.ಎಂ.ಸಿ.ಸುಧಾಕರ್ರವರ ಉಪಸ್ಥಿತಿಯಿದ್ದು, ಮುಖ್ಯ ಅತಿಥಿಗಳಾಗಿ ಹೈದರಾಬಾದ್ ವಿಶ್ವವಿದ್ಯಾಲಯದ ನಿವೃತ್ತ ಕುಲಪತಿ ಪ್ರೊ.ರಾಮ್ ರಾಮಸ್ವಾಮಿ ಭಾಗವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಕುವೆಂಪು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಶರತ್ ಅನಂತಮೂರ್ತಿ, ಕುಲಸಚಿವರಾದ ಎ.ಎಲ್.ಮಂಜುನಾಥ್, ಮೌಲ್ಯಮಾಪನ ಕುಲಸಚಿವರಾದ ಪ್ರೊ.ಎಸ್.ಎಂ.ಗೋಪಿನಾಥ್ ಪಾಲ್ಗೊಳ್ಳುವರು ಎಂದು ಪ್ರಕಟಣೆ ಹೊರಡಿಸಿದೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read