ಬೆಂಗಳೂರು : ಅಂಧತ್ವ ಮುಕ್ತ ಕರ್ನಾಟಕ ನಿರ್ಮಾಣದತ್ತ ಮಹತ್ವದ ಹೆಜ್ಜೆ ಇಟ್ಟಿರುವ ರಾಜ್ಯ ಸರ್ಕಾರವು ಮಹಾತ್ವಾಕಾಂಕ್ಷಿ ಆಶಾಕಿರಣ ಯೋಜನೆಯನ್ನು ರಾಜ್ಯಾದ್ಯಂತ ವಿಸ್ತರಿಸಲು ನಿರ್ಧರಿಸಿದೆ.
ಈ ನಿಟ್ಟಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ದಾರವನ್ನು ತೆಗೆದುಕೊಂಡಿದೆ. ಇದಕ್ಕಾಗಿ ₹13.30 ಕೋಟಿ ಮೊತ್ತವನ್ನು ಮೀಸಲಿರಿಸಲು ತೀರ್ಮಾನಿಸಿದೆ. ಈ ಮೂಲಕ ದೃಷ್ಟಿ ದೋಷ ಉಳ್ಳವರಿಗೆ ಉಚಿತವಾಗಿ ಕಣ್ಣಿನ ತಪಾಸಣೆ, ಶಸ್ತ್ರಚಿಕಿತ್ಸೆ ಮತ್ತು ಕನ್ನಡಕಗಳನ್ನು ವಿತರಿಸಲಾಗುತ್ತದೆ.