ಬೆಂಗಳೂರು : ‘ನಮ್ಮ ಮೆಟ್ರೋ’ ಪ್ರಯಾಣಿಕರಿಗೆ ಬಿಗ್ ಶಾಕ್ ಎದುರಾಗಿದ್ದು, ಟಿಕೆಟ್ ದರ ಏರಿಕೆಗೆ BMRCL ಗ್ರೀನ್ ಸಿಗ್ನಲ್ ನೀಡಿದೆ.
ಹೌದು, ಮೆಟ್ರೋ ದರ ಪರಿಷ್ಕರಣೆ ಸಂಬಂಧ ಇಂದು ಬಿಎಂಆರ್ ಸಿಎಲ್ ಅಧಿಕಾರಿಗಳು ಮತ್ತು ದರ ಏರಿಕೆ ಸಮಿತಿಯ ಸದಸ್ಯರ ಜೊತೆ ಇಂದು ಹೈವೋಲ್ಟೇಜ್ ಸಭೆ ನಡೆದಿದೆ. ಸಭೆಯಲ್ಲಿ ದರ ಏರಿಕೆ ಬಗ್ಗೆ ಫೈನಲ್ ಮಾಡಲಾಗಿದೆ. ಎಷ್ಟು ದರ ಏರಿಕೆ ಆಗಿದೆ ಎಂಬುದನ್ನು ನಾಳೆ ಸುದ್ದಿಗೋಷ್ಟಿ ನಡೆಸಿ ಅಧಿಕೃತವಾಗಿ ಘೋಷಣೆ ಮಾಡುವ ಸಾಧ್ಯತೆಯಿದೆ.
ಮೂಲಗಳ ಪ್ರಕಾರ ಶೇ.15 ರಿಂದ 20 ರಷ್ಟು ಹೆಚ್ಚಿಸುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ.2017 ರಲ್ಲಿ ನಮ್ಮ ಮೆಟ್ರೋ ಟಿಕೆಟ್ ದರ ಶೇ.10-15 ರಷ್ಟು ಏರಿಕೆ ಮಾಡಲಾಗಿತ್ತು. ಇದೀಗ ಶೇ.15 ರಿಂದ 20 ರಷ್ಟು ಹೆಚ್ಚಿಸುವ ಸಾಧ್ಯತೆಯಿದೆ. ಬೆಂಗಳೂರಿಗರ ಜೀವನಾಡಿಯಾಗಿರುವ ನಮ್ಮ ಮೆಟ್ರೋದಲ್ಲಿ ಪ್ರತಿನಿತ್ಯ ಸಾವಿರಾರು ಜನ ಸಂಚಾರ ಮಾಡುತ್ತಾರೆ. ಕಾರ್ಯಾಚರಣೆ ವೆಚ್ಚ ಅಧಿಕವಾದ ಹಿನ್ನೆಲೆ ನಮ್ಮ ಮೆಟ್ರೋ ಪ್ರಯಾಣ ದರ ಹೆಚ್ಚಳಕ್ಕೆ ಪ್ರಸ್ತಾಪ ಮಾಡಲಾಗಿತ್ತು. ಈಗಾಗಲೇ ಬಸ್ ಟಿಕೆಟ್ ದರ ಹೆಚ್ಚಳವಾಗಿದ್ದು, ಈ ಬೆನ್ನಲ್ಲೇ ಮತ್ತೊಂದು ಶಾಕ್ ಎದುರಾಗಿದೆ.