HomeKarnatakaBIG UPDATE : ರಾಜ್ಯದಲ್ಲಿ ಹಾಡಹಗಲೇ ಮತ್ತೊಂದು ದರೋಡೆ : ಬ್ಯಾಂಕ್'ಗೆ ನುಗ್ಗಿ10 -12...

BIG UPDATE : ರಾಜ್ಯದಲ್ಲಿ ಹಾಡಹಗಲೇ ಮತ್ತೊಂದು ದರೋಡೆ : ಬ್ಯಾಂಕ್’ಗೆ ನುಗ್ಗಿ10 -12 ಕೋಟಿ ಚಿನ್ನ, ನಗದು ಲೂಟಿ.!

ಮಂಗಳೂರು : ರಾಜ್ಯದಲ್ಲಿ ಸಾಲು ಸಾಲು ದರೋಡೆ ಪ್ರಕರಣ ನಡೆಯುತ್ತಿದ್ದು, ಬೀದರ್ ಬೆನ್ನಲ್ಲೇ ಮಂಗಳೂರಿನಲ್ಲಿ ಬ್ಯಾಂಕ್ ದರೋಡೆ ನಡೆಸಲಾಗಿದೆ.

ಮಾಹಿತಿ ಪ್ರಕಾರ ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ತಾಲೂಕಿನ ಕೋಟೆಕಾರು ಬ್ಯಾಂಕ್’ ಗೆ ನುಗ್ಗಿದ ದುಷ್ಕರ್ಮಿಗಳು ಬಂದೂಕು ತೋರಿಸಿ ಹಣ, ಚಿನ್ನಾಭರಣ ದೋಚಿ ಪರಾರಿಯಾಗಿದ್ದಾರೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, 10 ರಿಂದ 12 ಕೋಟಿ ಚಿನ್ನ, ನಗದು ದರೋಡೆ ಮಾಡಿ ಎಸ್ಕೇಪ್ ಆಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಬಂದೂಕು ತೋರಿಸಿ ಬ್ಯಾಂಕ್ ಸಿಬ್ಬಂದಿಗಳಿಗೆ ಬೆದರಿಕೆಯೊಡ್ಡಿ ಹಣ, ಚಿನ್ನಾಭರಣ ದೋಚಿದ್ದಾರೆ ಎಂಬ ಮಾಹಿತಿ ಇದೀಗ ಲಭ್ಯವಾಗಿದೆ.ಬ್ಯಾಂಕ್ ಗೆ ನುಗ್ಗಿದ ದುಷ್ಕರ್ಮಿಗಳು ಬಂದೂಕಿನಿಂದ ಬ್ಯಾಂಕ್ ಸಿಬ್ಬಂದಿಯನ್ನು ಬೆದರಿಸಿ ಹಣ , ಚಿನ್ನಾಭರಣ ದೋಚಿ ಕಾರಿನಲ್ಲಿ ಎಸ್ಕೇಪ್ ಆಗಿದ್ದಾರೆ. ಹಾಡಹಗಲೇ ಸಿನಿಮೀಯ ರೀತಿಯಲ್ಲಿ ದರೋಡೆ ನಡೆದಿರುವುದು ಆತಂಕಕ್ಕೆ ಕಾರಣವಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಘಟನೆ ನಡೆದ ಸ್ಥಳಕ್ಕೆ ಉಳ್ಳಾಲ ಠಾಣೆ ಪೊಲೀಸರು ಹಾಗೂ ಶ್ವಾನದಳ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆರೋಪಿಗಳ ಬಂಧನಕ್ಕೆ ವಿಶೇಷ ತಂಡ ರಚನೆ ಮಾಡಲು ಸೂಚನೆ ನೀಡಲಾಗಿದೆ ಎಂದು ಸ್ಪೀಕರ್ ಯುಟಿ ಖಾದರ್ ಹೇಳಿದ್ದಾರೆ.

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular