ಬೆಂಗಳೂರು: ಸಚಿವೆ ಲಕ್ಷ್ಮೀ ಹೆಬ್ಬಳ್ಕರ್ ಬಗ್ಗೆ ವಿಧಾನಪರಿಶತ್ ನಲ್ಲಿ ಆಕ್ಷೇಪಾರ್ಹ ಪದ ಬಳಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಾಯ್ಸ್ ಸ್ಯಾಂಪಲ್ ನೀಡಲು ನಿರಾಕರಿಸಿದ್ದ ಬಿಜೆಪಿ ಎಂಎಲ್ ಸಿ ಸಿ.ಟಿ.ರವಿಗೆ ಹೈಕೋರ್ಟ್ ಶಾಕ್ ನೀಡಿದೆ.
ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹಾಗೂ ಸಿ.ಟಿ.ರವಿ ಕುರಿತ ಪ್ರಕರಣದ ತನಿಖೆ ನಡೆಸುತ್ತಿರುವ ಸಿಐಡಿ ಅಧಿಕಾರಿಗಳಿಗೆ ಸಿ.ಟಿ.ರವಿ ವಾಯ್ಸ್ ಸ್ಯಾಂಪಲ್ ನೀದಲು ನಿರಾಕರಿಸಿದ್ದರು. ಈ ಹಿನ್ನೆಲೆಯಲ್ಲಿ ಸಿಐಡಿ ಅಧಿಕಾರಿಗಳು ಸಿ.ಟಿ.ರವಿ ತನಿಖೆಗೆ ಸಹಕರಿಸುತ್ತಿಲ್ಲ ಎಂದು ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ಸಿ.ಟಿ.ರವಿಗೆ ಹೈಕೋರ್ಟ್ ನೋಟಿಸ್ ನೀಡಿತ್ತು.
ಇಂದು ಅರ್ಜಿ ವಿಚರಣೆ ನಡೆಸಿದ ಹೈಕೋರ್ಟ್, ವೈಸ್ ಸ್ಯಾಂಪಲ್ ನೀಡಲು ಸೂಚಿಸಿದೆ. ಈ ವೇಳೆ ಸಿ.ಟಿ.ರವಿ ಪರ ವಕೀಲರು ಸಿಐಡಿ ಒಂದೇ ದಿನ ಎರಡು ನೋಟಿಸ್ ನೀಡಿದೆ. ವಾಟ್ಸಪ್ ನಲ್ಲಿ ನೋಟಿಸ್ ನೀಡಲಾಗಿದೆ ಎಂದಿದ್ದಾರೆ. ಇದಕ್ಕೆ ಗರ ಆದ ಹೈಕೋರ್ಟ್, ನಿಮಗೆ ಆಕ್ಷೇಪಣೆ ಇದ್ದರೆ ಸಲ್ಲಿಸಿ. ಇಲ್ಲವಾದಲ್ಲಿ ಆದೇಶ ಹೊರಡಿಸುತ್ತೇನೆ. ಸಿ.ಟಿ.ರವಿ ವಾಯ್ಸ್ ಸ್ಯಾಂಪಲ್ ಕೊಡಬೇಕು. ಏನು ಎಂಬುದನ್ನು ನಾಳೆ ತಿಳಿಸಬೇಕು ಇಲ್ಲವಾದಲ್ಲಿ ಕೋರ್ಟ್ ಆದೇಶ ನೀಡುತ್ತದೆ ಎಂದು ತಿಳಿಸಿದೆ. ಈ ಹಿನ್ನೆಲೆಯಲ್ಲಿ ಸಿ.ಟಿ.ರವಿಗೆ ಮತ್ತೆಸಂಕಷ್ಟ ಎದುರಾಗುವ ಸಾಧ್ಯತೆ ಇದೆ.