ರಾಯಚೂರು: ವೈದ್ಯರೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟಟನೆ ರಾಯಚೂರು ಜಿಲ್ಲೆಯ ಲಿಂಗಸಗೂರು ತಾಲೂಕಿನ ಮುದಗಲ್ ಪಟ್ಟಣದ ಹೊರವಲಯದಲ್ಲಿ ನಡೆದಿದೆ.
ರಮೇಶ್ ಜಾದವ್ ತುಳಸಿರಾಮ್ (32) ಆತ್ಮಹತ್ಯೆ ಮಡಿಕೊಂಡಿರುವ ವೈದ್ಯ. ರಮೇಶ್ ಜಾದವ್ ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಗಾಣದಾಳ ಮೂಲದವರು.
ಮುದಗಲ್ ಪಟ್ಟಣದ ಹೊರವಲಯದಲ್ಲಿ ಕ್ವಾರಿ ಬಳಿ ಕಾರು ನಿಲ್ಲಿಸಿ ಅಲ್ಲಿಂದ ಒಂದು ಕಿ.ಮೀ ದೂರ ನಡೆದುಕೊಂಡು ಹೋಗಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಡಾ.ರಮೇಶ್ ಜಾದವ್ ಸಾವಿನ ಬಗ್ಗೆ ಪತ್ನಿ ಅನುಮಾನ ವ್ಯಕ್ತಪಡಿಸಿದ್ದಾರೆ. ಪತ್ನಿ ಆಳಂದದಲ್ಲಿ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದಾರೆ. ಈಗ ಪತಿ ಇದ್ದಕ್ಕಿದ್ದಂತೆ ಮಾರ್ಗ ಮಧ್ಯೆ ಆತ್ಮಹತ್ಯೆಗೆ ಶರಣಾಗಿದ್ದು ಅನುಮಾನಕ್ಕೆ ಕಾರಣವಾಗಿದೆ ಎಂದಿದ್ದಾರೆ.
ಘಟನಾ ಸ್ಥಳಕ್ಕೆ ಮುದಗಲ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.