ಬೆಂಗಳೂರು: ಬೆಂಗಳೂರು ಉತ್ತರ ತಾಲೂಕಿನ ಹೊನ್ನಸಂದ್ರದಲ್ಲಿ ನಿರ್ಮಾಣ ಹಂತದ ಮನೆ ಮೇಲಿಂದ ಬಿದ್ದು ಕಟ್ಟಡ ಕಾರ್ಮಿಕ ಸಾವನ್ನಪ್ಪಿದ್ದಾರೆ.
ರಾಯಚೂರು ಮೂಲದ ರಾಜ್ ಮೊಹಮದ್(32) ಮೃತಪಟ್ಟವರು ಎಂದು ಹೇಳಲಾಗಿದೆ. ಪಿಒಪಿ ಕೆಲಸ ಮಾಡುತ್ತಿದ್ದಾಗ ಆಯತಪ್ಪಿ ಕೆಳಗೆ ಬಿದ್ದು ಸಾವನ್ನಪ್ಪಿದ್ದಾರೆ. ಬಸವರಾಜು ಎಂಬುವರಿಗೆ ಸೇರಿದ ನಿರ್ಮಾಣ ಹಂತದ ಕಟ್ಟಡದಲ್ಲಿ ಘಟನೆ ನಡೆದಿದೆ. 10 ವರ್ಷಗಳಿಂದ ನೆಲಮಂಗಲದಲ್ಲಿ ಕುಟುಂಬದವರ ಜೊತೆಗೆ ರಾಜ್ ಮೊಹಮ್ಮದ್ ವಾಸವಾಗಿದ್ದರು. ಮರಣೋತ್ತರ ಪರೀಕ್ಷೆಗಾಗಿ ನೆಲಮಂಗಲ ಸರ್ಕಾರಿ ಆಸ್ಪತ್ರೆಗೆ ಮೃತದೇಹ ಸ್ಥಳಾಂತರಿಸಲಾಗಿದೆ. ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.