ಬೆಂಗಳೂರು: ರಾಜ್ಯದ ಗ್ರಾಮೀಣ ರಸ್ತೆ ಕಾಮಗಾರಿಗಳಿಗೆ ವಿಧಾನಸಭಾ ಕ್ಷೇತ್ರಗಳಿಗೆ ತಲಾ 10 ಕೋಟಿ ರೂಪಾಯಿ ಅನುದಾನವನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಿದೆ.
189 ವಿಧಾನಸಭಾ ಕ್ಷೇತ್ರಗಳಿಗೆ 1890 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಲಾಗಿದೆ. ಆಯಾ ಶಾಸಕರ ಜೊತೆಗೆ ಸಮಾಲೋಚನೆ ನಡೆಸಿ ಕಾರ್ಯಯೋಜನೆ ರೂಪಿಸಲು ಸೂಚನೆ ನೀಡಲಾಗಿದೆ.
ಮಳೆಯಿಂದ ಹಾನಿಯಾದ ಗ್ರಾಮೀಣ ಭಾಗದ ರಸ್ತೆಗಳಿಗೆ ಮೊದಲ ಆದ್ಯತೆ ನೀಡಲು ತಿಳಿಸಲಾಗಿದೆ. 5 ಲಕ್ಷಕ್ಕಿಂತ ಕಡಿಮೆ ಮೊತ್ತಕ್ಕೆ ತುಂಡು ಗುತ್ತಿಗೆ ನೀಡದಂತೆ ಷರತ್ತು ವಿಧಿಸಲಾಗಿದೆ. ಶಾಸಕಾಂಗ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಶಾಸಕರಿಗೆ ಅನುದಾನದ ಭರವಸೆ ನೀಡಿದ್ದರು. ಅಂತೆಯೇ ಅನುದಾನ ಬಿಡುಗಡೆ ಮಾಡಲಾಗಿದೆ.