ಬೆಂಗಳೂರು: ಕೇಂದ್ರ ಕೃಷಿ, ರೈತರ ಕಲ್ಯಾಣ ಮತ್ತು ಗ್ರಾಮೀಣಾಭಿವೃದ್ಧಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ರಾತ್ರಿ ಬೆಂಗಳೂರಿಗೆ ಆಗಮಿಸಿದ್ದಾರೆ. ಬೆಂಗಳೂರಿನ ಕುಮಾರಕೃಪಾ ಅತಿಥಿ ಗೃಹದಲ್ಲಿ ವಾಸ್ತವ್ಯ ಹೂಡಿದ್ದಾರೆ.
ಇಂದು ವಿವಿಧ ಕಾರ್ಯಕ್ರಮಗಳಲ್ಲಿ ಅವರು ಭಾಗವಹಿಸಲಿದ್ದಾರೆ. ಬೆಳಗ್ಗೆ 8:30 ಕ್ಕೆ ಕೃಷಿ ಇಲಾಖೆ ಸಚಿವ ಚಲುವರಾಯ ಸ್ವಾಮಿ, ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರೊಂದಿಗೆ ಸಭೆ ನಡೆಸಲಿದ್ದು, ನಂತರ ಶಿವಮೊಗ್ಗ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ಶಿವಮೊಗ್ಗ ಹಾಗೂ ಸಾಗರದಲ್ಲಿ ನಡೆಯುವ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.
ಬೆಳಗ್ಗೆ ಜಕ್ಕೂರು ಏರೋ ಡ್ರಮ್ ನಿಂದ ಹೆಲಿಕಾಪ್ಟರ್ ಮೂಲಕ ಶಿವಮೊಗ್ಗಕ್ಕೆ ಪ್ರಯಾಣ ಬೆಳೆಸುವರು. ಪೆಸಿಟ್ ಕಾಲೇಜಿನಲ್ಲಿ ಆಯೋಜಿಸಿರುವ ಅಗ್ರಿಕಲ್ಚರ್ ಸ್ಟಾರ್ಟ್ ಅಪ್ ಎಕ್ಸಿಬಿಷನ್ ನಲ್ಲಿ ಭಾಗವಹಿಸಲಿದ್ದಾರೆ. ಅಲ್ಲಿಂದ ಸಾಗರಕ್ಕೆ ಪ್ರಯಾಣಿಸಲಿದ್ದು, ಅಡಿಕೆ ಬೆಳೆಗಾರರ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ನಂತರ ಪಕ್ಷದ ಪ್ರಮುಖರು, ರೈತರೊಂದಿಗೆ ಸಂವಾದ ನಡೆಸಲಿರುವವರು. ಸಂಜೆ ಬೆಂಗಳೂರಿಗೆ ವಾಪಸ್ ಆಗಲಿದ್ದು, ಭೋಪಾಲ್ ಗೆ ಪ್ರಯಾಣ ಬೆಳೆಸಲಿದ್ದಾರೆ.