ಬಳ್ಳಾರಿ: ರಾಜ್ಯದ ಎಪಿಎಂಸಿಗಳಲ್ಲಿ 10 ವರ್ಷಕ್ಕೂ ಹೆಚ್ಚು ಕಾಲ ಒಂದೇ ಕಡೆ ಕೆಲಸ ಮಾಡುತ್ತಿರುವ ಅಧಿಕಾರಿಗಳು, ಸಿಬ್ಬಂದಿ ಪಟ್ಟಿ ಸಿದ್ದಪಡಿಸುವಂತೆ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಬಳ್ಳಾರಿ ಎಪಿಎಂಸಿ ಮಾರುಕಟ್ಟೆಗೆ ಶುಕ್ರವಾರ ಭೇಟಿ ನೀಡಿ ಪರಿಶೀಲನೆ ನಡೆಸಿದ ಸಚಿವರು ಆಡಳಿತ ಮಂಡಳಿ, ಅಧಿಕಾರಿಗಳು ಮತ್ತು ಸಿಬ್ಬಂದಿಯೊಂದಿಗೆ ಸಭೆ ನಡೆಸಿದ್ದಾರೆ.
ರಾಜ್ಯದ ಎಪಿಎಂಸಿಗಳಲ್ಲಿ ಯಾವ ಸಿಬ್ಬಂದಿ ಒಂದೇ ಕಡೆ 10 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಅವರ ವಿರುದ್ಧದ ದೂರುಗಳು, ಭ್ರಷ್ಟಾಚಾರದ ಪ್ರಕರಣಗಳು ಎಷ್ಟು ಎಂಬುದರ ಪಟ್ಟಿ ಕೊಡಿಸುವಂತೆ ಸೂಚಿಸಿದ್ದಾರೆ.
ಎಪಿಎಂಸಿಗಳಲ್ಲಿ ಮಧ್ಯವರ್ತಿಗಳಿಗೆ ನೀಡಲಾಗುವ ಪರವಾನಿಗೆ ಅವಧಿಯನ್ನು 10 ವರ್ಷದ ಬದಲು 5 ವರ್ಷಕ್ಕೆ ಮಿತಿಗೊಳಿಸಲು ಚಿಂತನೆ ನಡೆದಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.