ಹಾಸನ: ಹಾಸನ ಶಿಕ್ಷಣ ಇಲಾಖೆ ಕಚೇರಿಯಲ್ಲಿ ಬೆಳಗ್ಗೆ ಸಿಬ್ಬಂದಿ, ಸಂಜೆ ಡಿಡಿಪಿಐ ಅಮಾನತುಗೊಂಡಿದ್ದಾರೆ. ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಥಮ ದರ್ಜೆ ಸಹಾಯಕ ಮಂಜುನಾಥ್ ಅವರನ್ನು ಗುರುವಾರ ಬೆಳಿಗ್ಗೆ ಡಿಡಿಪಿಐ ಹೆಚ್.ಕೆ. ಪಾಂಡು ಅವರು ಸೇವೆಯಿಂದ ಅಮಾನತು ಮಾಡಿದ್ದಾರೆ.
ಲಂಚ ಪ್ರಕರಣದಲ್ಲಿ ಸಂಜೆ ಹೆಚ್.ಕೆ. ಪಾಂಡು ಅವರೇ ಅಮಾನತುಕೊಂಡಿದ್ದಾರೆ. ಕಚೇರಿ ಅಧೀಕ್ಷಕ ವೇಣುಗೋಪಾಲ್ ಅವರನ್ನು ಕೂಡ ಅಮಾನತು ಮಾಡಲಾಗಿದೆ. ಲಂಚ ಪಡೆಯುವಾಗ ಸಿಕ್ಕಿಬಿದ್ದ ಹೆಚ್.ಕೆ. ಪಾಂಡು ಮತ್ತು ವೇಣುಗೋಪಾಲ್ ಅವರನ್ನು ಜನವರಿ 4ರಂದು ಪೊಲೀಸರು ಬಂಧಿಸಿದ್ದರು. ಗುರುವಾರ ಜಾಮೀನು ಪಡೆದು ಕರ್ತವ್ಯಕ್ಕೆ ಹಾಜರಾಗಿದ್ದ ಇಬ್ಬರನ್ನು ಅಮಾನತು ಮಾಡಲಾಗಿದೆ.