ಬೆಂಗಳೂರು: ರಾಜ್ಯ ಬಜೆಟ್ ಮಂಡನೆಗೂ ಮುನ್ನವೇ ಕಾಂಗ್ರೆಸ್ ಶಾಸಕರು ವಿದೇಶ ಪ್ರವಸಕ್ಕೆ ತೆರಳುತ್ತಿದ್ದು, ಈ ಬಗ್ಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಅಚ್ಚರಿ ಹೇಳಿಕೆ ನೀಡಿದ್ದಾರೆ.
ಬಜೆಟ್ ಅಧಿವೇಶನಕ್ಕೂ ಮುನ್ನ ರಾಜ್ಯ ನೂತನ ಶಾಸಕರು ದುಬೈ, ಸಿಂಗಾಪುರ ಪ್ರವವಾಸಕ್ಕೆ ತೆರಳುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಡಿಸಿಎಂ ಡಿ.ಕೆ.ಶಿವಕುಮಾರ್, ಈ ಬಗ್ಗೆ ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೇವಾಲಾ ಅವರನ್ನು ಕೇಳಿ ಎಂದು ಅಚ್ಚರಿ ಮೂಡಿಸಿದ್ದಾರೆ.
ಈ ಬಗ್ಗೆ ನನಗೇನೂ ಗೊತ್ತಿಲ್ಲ. ಸುರ್ವೇವಾಲ ಸಾಹೇಬರನ್ನು ಕೇಳಿ, ನನ್ನದೇನಿದ್ದರೂ ಸಮಾವೇಶ, ಪಕ್ಷ ಸಂಘಟನೆ ಮಾಡುವ ಕೆಲಸ ಎಂದರು.