ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ-ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಯಾವುದೇ ಕ್ಷಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನೋಟಿಸ್ ನೀಡುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.
ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಇಡಿ (ಜಾರಿ ನಿರ್ದೇಶನಾಲಯ)ಅಧಿಕಾರಿಗಳು 300 ಕೋಟಿ ಮೌಲ್ಯದ ಸ್ಥಿರಾಸ್ತಿಗಳನ್ನು ಮುಟ್ಟುಗೋಲು ಹಾಕಿಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ವಿಚಾರಣೆ ನಿಟ್ಟಿನಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಪತ್ನಿ ಪಾರ್ವತಿ ಅವರಿಗೆ ಯಾವುದೇ ಕ್ಷಣದಲ್ಲಾದರೂ ನೋಟಿಸ್ ನೀಡುವ ಸಾಧ್ಯತೆ ಇದೆ. ವಿಚಾರಣೆಗೆ ಹಾಜರಾಗುವಂತೆ ಸೂಚಿಸುವ ಸಾಧ್ಯತೆ ಇದೆ.
ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಎ1 ಆರೋಪಿಯಾಗಿದ್ದರೆ ಪತ್ನಿ ಪಾರ್ವತಿ ಎ2 ಆರೋಪಿಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ ನೋಟಿಸ್ ನೀಡಿ ವಿಚಾರಣೆಗೆ ಕರೆಯುವ ಸಾಧ್ಯತೆ ಇದೆ.