ಬೆಳಗಾವಿ: ಮೂಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರಿಗೆ ಯಾವುದೇ ಕ್ಷಣದಲ್ಲಿ ಇಡಿ ಅಧಿಕಾರಿಗಳು ನೋಟಿಸ್ ನೀಡುವ ಸಾಧ್ಯತೆ ಬಗ್ಗೆ ಪ್ರತಿಕ್ರಿಯಿಸಿದ ಡಿಸಿಎಂ ಡಿ.ಕೆ.ಶಿವಕುಮಾರ್, ಸಿಎಂ ವಿರುದ್ಧ ರಾಜಕೀಯ ಪಿತೂರಿ ನಡೆದಿದೆ ಎಂದು ವಾಗ್ದಾಳಿ ನಡೆಸಿದರು.
ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ಒಂದು ಪ್ರಕರಣ ಎಂದರೆ ಅದರ ತನಿಖೆ ಸುದೀರ್ಘ ಪ್ರಕ್ರಿಯೆಯಾಗಿದೆ. ಇಲ್ಲಿ ಅಕ್ರಮ ನಡೆದಿದೆಯೇ ಇಲ್ಲವೇ ಎಂದು ನ್ಯಾಯಾಲಯ ವಿಚಾರಣೆ ಮಾಡಬೇಕೆ ಹೊರತು, ನೀವು ನಾನು ವಿಚಾರಣೆ ಮಾಡುವಂತಹದಲ್ಲ. ನಾನು ಇಡಿ ತನಿಖೆ ನೋಡಿದ್ದೇನೆ. ಈ ಪ್ರಕರಣದ ಬಗ್ಗೆ ನಾನು ಹೆಚ್ಚಿಗೆ ಏನು ಹೇಳುವುದಿಲ್ಲ ಎಂದರು.
ಮುಖ್ಯಮಂತ್ರಿಗಳು ಹಾಗೂ ಅವರ ಕುಟುಂಬದ ವಿರುದ್ಧ ರಾಜಕೀಯ ಪಿತೂರಿ ನಡೆಯುತ್ತಿದೆ. ಮುಖ್ಯಮಂತ್ರಿಗಳಾಗಲಿ, ಅವರ ಧರ್ಮಪತ್ನಿ ಅವರಾಗಲಿ ಯಾವುದೇ ಅಕ್ರಮದಲ್ಲಿ ಭಾಗಿಯಾಗಿಲ್ಲ. ಈ ವಿಚಾರ ಬಿಟ್ಟು ರಾಜ್ಯದ ವಿಚಾರದ ಬಗ್ಗೆ ಗಮನಹರಿಸಿ ಎಂದು ಹೇಳಿದರು.