ಬೆಂಗಳೂರು : ರಾಜ್ಯದ ಕ್ರೀಡಾಪಟುಗಳು ಒಲಿಂಪಿಕ್ಸ್ ನಲ್ಲಿ ಪದಕ ಗೆದ್ದರೆ 6 ಕೋಟಿ ರೂ.ಬಹುಮಾನ ನೀಡಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.
ಯುವಜನ ಮತ್ತು ಕ್ರೀಡಾ ಇಲಾಖೆ ಹಾಗೂ ದಕ್ಷಿಣ ಕನ್ನಡ ಜಿಲ್ಲಾಡಳಿತದ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ “ಕರ್ನಾಟಕ ಕ್ರೀಡಾಕೂಟ 2025” ಅನ್ನು ಉದ್ಘಾಟಿಸಿ, ಕ್ರೀಡಾಳುಗಳಿಗೆ ಶುಭ ಕೋರಿದರು.
ರಾಜ್ಯದ ಕ್ರೀಡಾಪಟುಗಳು ಒಲಿಂಪಿಕ್ಸ್ ನಲ್ಲಿ ಪದಕ ಜಯಿಸಿದರೆ ₹6 ಕೋಟಿ ಬಹುಮಾನ ನೀಡಲಾಗುವುದು. ಮುಂಬರುವ ಬಜೆಟ್ನಲ್ಲಿ ದಕ್ಷಿಣ ಕನ್ನಡ ಹಾಗೂ ಉಡುಪಿ ಕ್ರೀಡಾಂಗಣಗಳ ಉನ್ನತೀಕರಣಕ್ಕೆ ₹3 ಕೋಟಿ ಅನುದಾನ ನೀಡಲಾಗುವುದು ಎಂದರು.
ವಿಧಾನಸಭಾಧ್ಯಕ್ಷರಾದ ಯು.ಟಿ.ಖಾದರ್, ಕರ್ನಾಟಕ ಒಲಂಪಿಕ್ ಅಸೋಸಿಯೇಷನ್ ಅಧ್ಯಕ್ಷರಾದ ಕೆ.ಗೋವಿಂದರಾಜು, ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್, ವಿಧಾನಪರಿಷತ್ ಸದಸ್ಯರಾದ ಮಂಜುನಾಥ್ ಭಂಡಾರಿ, ಐವನ್ ಡಿಸೋಜಾ, ಮಾಜಿ ಸಚಿವರಾದ ರಮಾನಾಥ ರೈ ಸೇರಿ ಜಿಲ್ಲೆಯ ಶಾಸಕರುಗಳು ಮತ್ತು ಪ್ರಮುಖರು ಉಪಸ್ಥಿತರಿದ್ದರು.
ಪ್ರತಿ ಜಿಲ್ಲೆಯಲ್ಲೊಂದು ಸರ್ಕಾರಿ ಮೆಡಿಕಲ್ ಕಾಲೇಜು ಇರಬೇಕು ಎನ್ನುವುದು ನಮ್ಮ ಆಶಯ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಉತ್ಕೃಷ್ಟ ಆರೋಗ್ಯ ಸೇವೆ ಇದ್ದರೂ ಸರ್ಕಾರಿ ವೈದ್ಯಕೀಯ ಕಾಲೇಜಿನ ಅಗತ್ಯವಿದೆ. ಹೀಗಾಗಿ ಈ ದಿಕ್ಕಿನಲ್ಲಿ ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಸಿಎಂ ಹೇಳಿದ್ದಾರೆ.
ರಾಜ್ಯದ ಕ್ರೀಡಾಪಟುಗಳು ಒಲಿಂಪಿಕ್ಸ್ ನಲ್ಲಿ ಪದಕ ಜಯಿಸಿದರೆ ₹6 ಕೋಟಿ ಬಹುಮಾನ ನೀಡಲಾಗುವುದು. ಮುಂಬರುವ ಬಜೆಟ್ನಲ್ಲಿ ದಕ್ಷಿಣ ಕನ್ನಡ ಹಾಗೂ ಉಡುಪಿ ಕ್ರೀಡಾಂಗಣಗಳ ಉನ್ನತೀಕರಣಕ್ಕೆ ₹3 ಕೋಟಿ ಅನುದಾನ ನೀಡಲಾಗುವುದು. #ಕನ್ನಡಸುದ್ದಿ pic.twitter.com/QZNvrSKF3k
— Siddaramaiah (@siddaramaiah) January 18, 2025
;