ಯೂಕೋ ಬ್ಯಾಂಕ್ನಲ್ಲಿ ಖಾಲಿ ಇರುವ 250 ಕ್ಕೂ ಹೆಚ್ಚು ಲೋಕಲ್ ಬ್ಯಾಂಕ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
20 ರಿಂದ 30 ವರ್ಷದೊಳಗಿನ ಪದವೀಧರ ಅಭ್ಯರ್ಥಿಗಳು ದಿನಾಂಕ 16.1.2025 ರಿಂದ 5.2.2025 ರೊಳಗೆ ವೆಬ್ಸೈಟ್ ವಿಳಾಸ https://www.ucobank.com/en/ ಕ್ಕೆ ಭೇಟಿ ನೀಡಿ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.
ಹಾಸನದ ಸಾಲಗಾಮೆ ರಸ್ತೆಯಲ್ಲಿರುವ ಕೃಷಿಕ್ ಸರ್ವೋದಯ ಫೌಂಡೇಶನ್(ರಿ) ನಲ್ಲಿ ಬ್ಯಾಂಕ್ ನೇಮಕಾತಿ ಪರೀಕ್ಷೆ ಮತ್ತು ಇನ್ಶುರೆನ್ಸ್ ಕಂಪನಿಗಳ ನೇಮಕಾತಿ ಪರೀಕ್ಷೆಗಳಿಗೆ ನುರಿತ ವಿಷಯ ತಜ್ಞರಿಂದ ರಿಯಾಯಿತಿ ದರದಲ್ಲಿ ತರಬೇತಿ ನೀಡಲಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ 8660217739 ಸಂಖ್ಯೆಗೆ ಕರೆ ಅಥವಾ ವಾಟ್ಸಾಪ್ ಮಾಡಬಹುದಾಗಿದೆ ಎಂದು ಶಾಖೆಯ ಗೌರವ ಕಾರ್ಯದರ್ಶಿ ಎಚ್.ಪಿ.ಮೋಹನ್ ಅವರು ತಿಳಿಸಿದ್ದಾರೆ.