ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮ(ನಿ) ಕೊಡಗು ಇವರ ವತಿಯಿಂದ 2024-25ನೇ ಸಾಲಿಗೆ ಮತೀಯ ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ಖ್, ಪಾರ್ಸಿ ಜನಾಂಗದವರಿಗೆ ಅರಿವು(ರಿನಿವಲ್) ಯೋಜನೆಯಡಿಯಲ್ಲಿ ನಿಗಮದಿಂದ ಸಾಲ ಸೌಲಭ್ಯಗಳನ್ನು ನೀಡಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ ಅರಿವು (ರಿನಿವಲ್) ವಿಧ್ಯಾಭ್ಯಾಸ ಯೋಜನೆಯಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ(ಕೆಇಎ-ಸಿಇಟಿ/ನೀಟ್ ಮುಖಾಂತರ) ಎಂಬಿ, ಎಂಎಸ್ಎಂಡಿ, ಎಂಎಸ್, ಬಿಡಿಎಸ್, ಎಂಡಿಎಸ್, ಬ್ಯಾಚುಲರ್ ಆಫ್ ಆರ್ಕಿಟೆಕ್ಚರ್, ಇಂಜಿನಿಯರಿಂಗ್, ಟೆಕ್ನಾಲಜಿ(ಬಿ.ಇ/ಬಿಟೆಕ್), ಎಂ ಟೆಕ್,ಎಂಇಬಿ ಆರ್ಕ್, ಎಂಆರ್ಕ್, ಎಂ.ಬಿ.ಎ, ಎಂ.ಸಿ.ಎ, ಎಲ್.ಎಲ್.ಬಿ, ಬಿಎಸ್ಸಿ ಆರ್ಟಿಕಲ್ಚರ್, ಅಗ್ರಿಕಲ್ಚರ್, ಡೈರಿ ಟೆಕ್ನಾಲಜಿ, ಪಾರೆಸ್ಟ್ರೀ, ವೆಟರ್ನರಿ, ಎನಿಮಲ್ ಸೈನ್ಸ್, ಫುಡ್ ಟೆಕ್ನಾಲಜಿ, ಬಯೋ ಟೆಕ್ನಾಲಜಿ, ಮೀನುಗಾರಿಕೆ, ಸೆರಿಕಲ್ಚರ್, ಹೋಮ್/ಕಮ್ಯುನಿಟಿ ಸೈನ್ಸ್, ಫುಡ್ ನ್ಯೂಟ್ರೀಷನ್ ಅಂಡ್ ಡಯಾಟಿಕ್ಸ್ ವ್ಯಾಸಂಗಗಳಿಗೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಸಾಲವನ್ನು ನೀಡಲಾಗುತ್ತದೆ. ವಿದ್ಯಾರ್ಥಿಗಳಿಗೆ ಅರಿವು(ರಿನಿವಲ್) ಯೋಜನೆಯಡಿ ಶೈಕ್ಷಣಿಕ ಸಾಲವನ್ನು ಪಡೆಯಲು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ನಿಗಮದ ವೆಬ್ಸೈಟ್ https://kmdconline.karnataka.gov.in/ ಮೂಲಕ ಆನ್ಲೈನ್ ಅರ್ಜಿ ಸಲ್ಲಿಸಬಹುದು. ವಿದ್ಯಾರ್ಥಿಗಳು ಆನ್ಲೈನ್ ಮೂಲಕ ಅರ್ಜಿಯನ್ನು ಕಂಪ್ಯೂಟರ್ನಲ್ಲಿ ಭರ್ತಿ ಮಾಡಿದ ಕೂಡಲೇ ಅರ್ಜಿಯನ್ನು ಪ್ರಿಂಟೌಟ್ ಪಡೆದು ಕ್ಯೂಆರ್ ಕೋಡ್ ಹೊಂದಿದ ಅರ್ಜಿಯೊಂದಿಗೆ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಎಸ್ಎಸ್ಎಲ್ಸಿ ಅಂಕಪಟ್ಟಿ, ಪಿಯುಸಿ ಅಂಕಪಟ್ಟಿ, ಆಧಾರ್ ಕಾರ್ಡ್, ಫೋಟೋ 04(ಪಾಸ್ ಪೋಟ್ ಸೈಜ್), ಸಿಇಟಿ/ನೀಟ್ ಹಾಲ್ ಟಿಕೆಟ್ ಪ್ರತಿಗಳು ಮತ್ತು ನೋಟರಿ ಮಾಡಿಸಿದ ಛಾಪ ಕಾಗದದಲ್ಲಿ Indemnity Bond ಈ ಎಲ್ಲಾ ದಾಖಲಾತಿಗಳನ್ನು “ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ(ನಿ), ಮೌಲಾನಾ ಅಜಾದ್ ಭವನ, ಗ್ರಾಮಾಂತರ ಪೋಲೀಸ್ ಠಾಣೆ ಹತ್ತಿರ, ಎಫ್ಎಂಸಿ ಕಾಲೇಜು ರಸ್ತೆ, ಮಡಿಕೇರಿ ತಾ. ಕೊಡಗು ಜಿಲ್ಲೆ ಈ ಕಚೇರಿಗೆ ಸಲ್ಲಿಸಲು ಸೂಚಿಸಿದೆ”.
ಹೆಚ್ಚಿನ ಮಾಹಿತಿ ಪಡೆಯಲು ಕಚೇರಿಯ ದೂ.ಸಂ.08272-201449 ನ್ನು ಸಂಪರ್ಕಿಸಬಹುದು. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಜನವರಿ, 31 ಕೊನೆಯ ದಿನವಾಗಿದೆ ಎಂದು ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.