ತುಮಕೂರು: ಪತ್ರಕರ್ತರ ಆರೋಗ್ಯ ವಿಮೆ ಜಾರಿ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು. ಶೀಘ್ರವೇ ಆರೋಗ್ಯ ವಿಮೆ ಜಾರಿಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ತುಮಕೂರಿನ ಸಿದ್ದಾರ್ಥ ತಾಂತ್ರಿಕ ಮಹಾವಿದ್ಯಾಲಯದಲ್ಲಿ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘ ಆಯೋಜಿಸಿದ್ದ ಎರಡು ದಿನಗಳ 39ನೇ ರಾಜ್ಯ ಮಟ್ಟದ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿ, ಪತ್ರಕರ್ತರಿಗೆ ಆರೋಗ್ಯ ವಿಮೆ ಜಾರಿ ಬಗ್ಗೆ ತೀರ್ಮಾನಿಸಲಾಗುವುದು. ಈಗಾಗಲೇ ಪತ್ರಕರ್ತರ ಕಲ್ಯಾಣಕ್ಕೆ ಬಜೆಟ್ ನಲ್ಲಿ 10 ಕೋಟಿ ರೂಪಾಯಿ ಇಡಲಾಗಿದೆ ಎಂದು ಹೇಳಿದ್ದಾರೆ.
ಕಳೆದ ಬಜೆಟ್ ನಲ್ಲಿ ಘೋಷಿಸಿದಂತೆ ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್ ಯೋಜನೆ ಜಾರಿ ಮಾಡಲಾಗಿದೆ. ಕೆಲವೇ ದಿನಗಳಲ್ಲಿ ಪಾಸ್ ಗಳು ಪತ್ರಕರ್ತರ ಕೈ ಸೇರಲಿವೆ. ಪತ್ರಕರ್ತರ ಮಾಸಾಶನವನ್ನು ಮೂರು ಸಾವಿರ ರೂಪಾಯಿಯಿಂದ 12 ಸಾವಿರ ರೂ.ಗೆ ಹೆಚ್ಚಳ ಮಾಡಲಾಗಿದೆ. ಇನ್ನೇನಾದರೂ ನ್ಯಾಯಯುತ ಬೇಡಿಕೆಗಳಿದ್ದಲ್ಲಿ ಸರ್ಕಾರ ಈಡೇರಿಸಲಿದೆ ಎಂದು ಭರವಸೆ ನೀಡಿದ್ದಾರೆ.