ಬೆಂಗಳೂರು: ಪರಿಶಿಷ್ಟ ಸಮುದಾಯದವರ ಮನೆ ನಿರ್ಮಾಣಕ್ಕೆ 5 ಲಕ್ಷ ರೂ. ಘಟಕ ನಿಧಿ ನಿಗದಿಗೊಳಿಸುವ ಕುರಿತಂತೆ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಲಾಗುವುದು ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಹೆಚ್.ಸಿ. ಮಹದೇವಪ್ಪ ಹೇಳಿದ್ದಾರೆ.
ಶನಿವಾರ ವಿಧಾನಸೌಧದಲ್ಲಿ ಹಮ್ಮಿಕೊಂಡಿದ್ದ ಪರಿಶಿಷ್ಟರ ಜಾತಿ ಯೋಜನೆ ನೋಡಲ್ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು. ರಾಜ್ಯದಲ್ಲಿ ವಸತಿರಹಿತ ಪರಿಶಿಷ್ಟರನ್ನು ಗುರುತಿಸಿ ಸ್ವಯಂ ಉದ್ಯೋಗ ಕೈಗೊಳ್ಳಲು ನೆರವು ನೀಡಬೇಕು. ಅನುದಾನ ಬಳಕೆ ಮಾಡಿಕೊಂಡು ಪರಿಶಿಷ್ಟರ ಅಭಿವೃದ್ಧಿಗೆ ಪೂರಕ ಯೋಜನೆ ರೂಪಿಸಬೇಕು. ಸಹಕಾರ ಕ್ಷೇತ್ರಗಳಲ್ಲಿ ಪರಿಶಿಷ್ಟರು ಪಾಲ್ಗೊಳ್ಳುವಂತೆ ಕ್ರಮ ವಹಿಸಬೇಕು, ಆಸಕ್ತರನ್ನು ನೋಂದಣಿ ಮಾಡಿಸಬೇಕು ಎಂದು ಹೇಳಿದ್ದಾರೆ.
ಪರಿಶಿಷ್ಟ ಸಮುದಾಯದ ಜನ ಮನೆ ನಿರ್ಮಿಸಿಕೊಳ್ಳಲು 5 ಲಕ್ಷ ಘಟಕ ನಿಧಿ ನಿಗದಿಗೊಳಿಸುವ ಕುರಿತಂತೆ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಲಾಗುವುದು ಎಂದು ಅವರು ಮಾಹಿತಿ ನೀಡಿದ್ದಾರೆ.