ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ಒಂದೆಡೆ ಬಣ ಬಡಿದಾಟ, ರಾಜ್ಯಾಧ್ಯಕ್ಷರ ಸ್ಥಾನ ಬದಲಾವಣೆಗಾಗಿ ಒತ್ತಾಯ ಕೇಳುಬರುತ್ತಿರುವ ನಡುವೆಯೇ ಶಾಸಕ ಸುನೀಲ್ ಕುಮಾರ್, ರಾಜ್ಯ ಪ್ರಧಾನಕಾರ್ಯದರ್ಶಿ ಹುದ್ದೆಯಿಂದ ತಮ್ಮನ್ನು ಬಿಡುಗಡೆಗೊಳಿಸುವಂತೆ ಮನವಿ ಮಾಡಿದ್ದಾರೆ.
ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ ಹಾಗೂ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರಿಗೆ ಪಕ್ಷದ ಹುದ್ದೆಯಿಂದ ತಮ್ಮನ್ನು ಬಿಡುಗಡೆ ಮಡುವಂತೆ ಕೋರಿದ್ದಾರೆ.
ತಮ್ಮ ನಿರ್ಧಾರಕ್ಕೆ ಬಣ ಬಡಿದಾಟ ಕಾರಣವಲ್ಲ. ವೈಯಕ್ತಿಕ ಕಾರಣಕ್ಕೆ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಬಿಡುಗಡೆಗೊಳಿಸಬೇಕು ಎಂದು ತಿಳಿಸಿದ್ದಾರೆ.