ಬೆಂಗಳೂರು: ಬಿಎಂಟಿಸಿ ಬಸ್ ಬ್ರೇಕ್ ಫೇಲ್ ಆಗಿ ಡಾಬಾ ಅಂಗಡಿಗೆ ನುಗ್ಗಿದ ಘಟನೆ ಬೆಂಗಳೂರಿನ ನಾಗದೇವನಹಳ್ಳಿಯಲ್ಲಿ ನಡೆದಿದೆ.
ಶಿರ್ಕೆ ಸರ್ಕಲ್ ನಿಂದ ನಾಗವಾರದ ಕಡೆಗೆ ತೆರಳುತ್ತಿದ್ದ ಚಲಿಸುತ್ತಿದ್ದ ಬಸ್ ಏಕಾಏಕಿ ಬ್ರೇಕ್ ಫೇಲ್ ಆಗಿ ಚಾಲಕನ ನಿಯಂತ್ರಣ ಕಳೆದುಕೊಂಡಿದೆ. ರಸ್ತೆ ಪಕ್ಕದಲ್ಲಿದ್ದ ಡಾಬಾ ಅಂಗಡಿಗೆ ನುಗ್ಗಿದೆ. ಬಸ್ ನಲ್ಲಿದ್ದ ಪ್ರಯಾಣಿಕರು, ಅಂಗಡಿಯವರು ಕಂಗಾಲಾಗಿದ್ದಾರೆ.
ಅದೃಷ್ಟವಶಾತ್ ಯಾವುದೇ ಹೆಚ್ಚಿನ ಅನಾಹುತ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.