ಮುಂಬೈ: ಬಾಲಿವುಡ್ ನಟ ಸೈಫ್ ಅಲಿ ಖಾನ್ ಗೆ ಚಾಕು ಇರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಲ್ಪಟ್ಟ ಆರೋಪಿಯನ್ನು ಪೊಲೀಸ್ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ ಹೊರಡಿಸಿದೆ.
ಬಂಧಿತ ಆರೋಪಿ ವಿಜಯ್ ದಾಸ್ ಅಲಿಯಾಸ್ ಮೊಹಮ್ಮದ್ ಷರಿಫುಲ್ಲಾನನ್ನು ಮುಂಬೈ ಪೊಲೀಸರು ಮಹಾರಾಷ್ಟ್ರದ ಥಾಣೆ ಬಳಿ ಬಂಧಿಸಿದ್ದರು. ಆರೋಪಿಯನ್ನು ಬಾಂದ್ರಾದ ಜಡ್ಜ್ ನಿವಾಸದಲ್ಲಿ ಜಡ್ಜ್ ಮುಂದೆ ಇಂದು ಹಾಜರುಪಡಿಸಲಾಗಿತ್ತು. ಈ ವೇಳೆ ಪೊಲೀಸರು ಆರೋಪಿ ಬಾಂಗ್ಲಾ ವಲಸಿಗನಾಗಿದ್ದು, ಅಕ್ರಮವಾಗಿ ಭಾರತಕ್ಕೆ ಬಂದಿರುವ ಶಂಕೆ ಇದೆ. ಘಟನೆ ಹಿಂದೆ ಅಂತರಾಷ್ಟ್ರೀಯ ಪಿತೂರಿ ಇರುವ ಅನುಮಾನವಿದೆ ಹಾಗಾಗಿ ಹೆಚ್ಚಿನ ತನಿಖೆ ನಡೆಸುವ ಅಗತ್ಯವಿದೆ ಪೊಲೀಸ್ ಕಸ್ಟಡಿಗೆ ನೀಡುವಂತೆ ಮನವಿ ಮಾಡಿದ್ದರು.
ಮನವಿ ಆಲಿಸಿದ ನ್ಯಾಯಾಧೀಶರು ಆರೋಪಿಯನ್ನು 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆವಹಿಸಿ ಸೂಕ್ತ ತನಿಖೆ ನಡೆಸುವಂತೆ ಸೂಚನೆ ನೀಡಿದ್ದಾರೆ.