ಶಿವಮೊಗ್ಗ: ಬಸ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಂಜಿನಿಯರ್ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಶಿವಮೊಗ್ಗ ಜಿಲ್ಲೆ ಆಯನೂರು ಸಮೀಪದ ಚಿನ್ಮನೆ ಗ್ರಾಮದ ಬಳಿ ನಡೆದಿದೆ.
ರಿಪ್ಪನ್ ಪೇಟೆಯಿಂದ ತೆರಳುತ್ತಿದ್ದ ಗಜಾನನ ಬಸ್ ಮತ್ತು ಆಯನೂರು ಮಾರ್ಗವಾಗಿ ರಿಪ್ಪನ್ ಪೇಟೆಗೆ ತೆರಳುತ್ತಿದ್ದ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ.
ಮಂಜುನಾಥ್(32) ಮೃತಪಟ್ಟವರು ಎಂದು ಹೇಳಲಾಗಿದೆ. ಕುಂಸಿ ಪೊಲೀಸ್ ಠಾಣಾ ವ್ಯಾಪ್ತಿಯ ಕೂರಂಬಳ್ಳಿ ನಿವಾಸಿಯಾಗಿರುವ ಮಂಜುನಾಥ್ ಇಂಜಿನಿಯರಿಂಗ್ ಪದವಿ ಮುಗಿಸಿದ್ದು ಮಹಾರಾಷ್ಟ್ರದಲ್ಲಿ ಕೆಲಸ ಮಾಡುತ್ತಿದ್ದರು. ಅವರ ಮದುವೆಗೆ ಸಿದ್ಧತೆ ನಡೆದಿದ್ದು, ಹುಡುಗಿ ನೋಡಲು ಊರಿಗೆ ಬಂದಿದ್ದ ವೇಳೆ ಅಪಘಾತ ಸಂಭವಿಸಿದೆ ಎನ್ನಲಾಗಿದೆ.