ಮಂಡ್ಯ: ರೈತರ ಜಮೀನುಗಳ ಪಹಣಿಯಲ್ಲಿ ವಕ್ಫ್ ಆಸ್ತಿ ಎಂದು ನಮೂದಾಗುತ್ತಿದ್ದು, ಇದನ್ನು ವಿರೋಧಿಸಿ ನಾಳೆ ವಿವಿಧ ಸಂಘಟನೆಗಳಿಂದ ಶ್ರೀರಂಗಪಟ್ಟಣ ಬಂದ್ ಗೆ ಕರೆ ನೀಡಲಾಗಿದೆ.
ನಾಳೆ ಬೆಳಗ್ಗೆ 6 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಬಂದ್ ನಡೆಯಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮನವಿ ಮಾಡಲಾಗಿದೆ. ವಿಶ್ವ ಹಿಂದೂ ಪರಿಷತ್, ಭಜರಂಗದಳ, ದಲಿತ ಸಂಘಟನೆಗಳು, ರೈತ ಸಂಘಟನೆಗಳು, ಕನ್ನಡ ಪರ ಸಂಘಟನೆಗಳು ಸೇರಿದಂತೆ ಅನೇಕ ಸಂಘ ಸಂಸ್ಥೆಗಳು ಬಂದ್ ಗೆ ಬೆಂಬಲ ನೀಡಿವೆ.
50ಕ್ಕೂ ಹೆಚ್ಚು ರೈತರ ಅರ್ಟಿಸಿಯಲ್ಲಿ ವಕ್ಫ್ ಆಸ್ತಿ ಎಂದು ಉಲ್ಲೇಖಿಸಲಾಗಿದೆ. ರೈತರ ಜಮೀನು ಮಾತ್ರವಲ್ಲದೆ ಪುರಾತತ್ವ ಇಲಾಖೆಯ ಕಟ್ಟಡಗಳು, ಕೋಟೆಗಳು, ಸಾರ್ವಜನಿಕ ಪಾರ್ಕ್ ಗಳು, ಸರ್ಕಾರಿ ಶಾಲೆ, ಪಾರಂಪರಿಕ ಕಟ್ಟಡ, ಆಸ್ತಿಗಳಲ್ಲಿ ವಕ್ಫ್ ಆಸ್ತಿ ಎಂದು ನಮೂದಾಗಿದ್ದು, ಅವುಗಳನ್ನು ಬದಲಾವಣೆ ಮಾಡಬೇಕೆಂದು ಬಂದ್ ಗೆ ಕರೆ ನೀಡಲಾಗಿದೆ. ಬಂದ್ ಸಂದರ್ಭದಲ್ಲಿ ಬೃಹತ್ ಪ್ರತಿಭಟನೆ ನಡೆಸಿ ತಾಲೂಕು ಆಡಳಿತದ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು.