ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಎರಡನೇ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣ ಕುರಿತಂತೆ ಎರಡು ದಿನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಸಭೆ ನಡೆಯಲಿದ್ದು, ನಂತರ ಎಲ್ಲಿ ವಿಮಾನ ನಿಲ್ದಾಣ ನಿರ್ಮಿಸಲಾಗುವುದು ಮತ್ತು ಏಕೆ ಎಂಬುದನ್ನು ಬಹಿರಂಗಪಡಿಸುವುದಾಗಿ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ.ಬಿ. ಪಾಟೀಲ್ ತಿಳಿಸಿದ್ದಾರೆ.
ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎರಡನೇ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಅನೇಕ ಸಭೆ ನಡೆಸಲಾಗಿದ್ದು, ಸ್ಥಳಗಳ ಕುರಿತಾಗಿಯೂ ಚರ್ಚೆ ನಡೆಸಲಾಗಿದೆ ಎಂದು ಹೇಳಿದ್ದಾರೆ.
ಎರಡು ದಿನದ ನಂತರ ಸಿಎಂ ಸಿದ್ದರಾಮಯ್ಯ ಅವರೊಂದಿಗೆ ಸಭೆ ನಡೆಸಿ ಎಲ್ಲ ಮಾಹಿತಿ ನೀಡಲಾಗುವುದು. ಎರಡನೇ ವಿಮಾನ ನಿಲ್ದಾಣ ಎಲ್ಲಿ ನಿರ್ಮಾಣವಾಗುತ್ತದೆ ಮತ್ತು ಏಕೆ ಎಂಬ ಮಾಹಿತಿಯನ್ನು ನೀಡಲಾಗುವುದು ಎಂದು ಹೇಳಿದ್ದಾರೆ.