alex Certify ಗ್ರೂಪ್ ಬಿ ಪರೀಕ್ಷೆಗೆ ನೋಂದಾಯಿತ ಅಭ್ಯರ್ಥಿಗಳಲ್ಲಿ ಕೇವಲ ಶೇ. 40ರಷ್ಟು ಮಂದಿ ಹಾಜರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗ್ರೂಪ್ ಬಿ ಪರೀಕ್ಷೆಗೆ ನೋಂದಾಯಿತ ಅಭ್ಯರ್ಥಿಗಳಲ್ಲಿ ಕೇವಲ ಶೇ. 40ರಷ್ಟು ಮಂದಿ ಹಾಜರು

ಬೆಂಗಳೂರು: ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಉಳಿಕೆ ಮೂಲವೃಂದದ 277 ಗ್ರೂಪ್ ಬಿ ವೃಂದದ ಹುದ್ದೆಗಳ ನೇಮಕಾತಿಗೆ ಭಾನುವಾರ ಸ್ಪರ್ಧಾತ್ಮಕ ಪರೀಕ್ಷೆ ನಡೆದಿದ್ದು, 1.08 ಲಕ್ಷ ಅಭ್ಯರ್ಥಿಗಳು ಗೈರು ಹಾಜರಾಗಿದ್ದಾರೆ.

ರಾಜ್ಯದ 478 ಪರೀಕ್ಷಾ ಕೇಂದ್ರಗಳಲ್ಲಿ ಪತ್ರಿಕೆ-1ರ ಸ್ಪರ್ಧಾತ್ಮಕ ಪರೀಕ್ಷೆ ನಡೆದಿದ್ದು, 1,81,314 ಅಭ್ಯರ್ಥಿಗಳು ಹೆಸರನ್ನು ನೋಂದಾಯಿಸಿಕೊಂಡಿದ್ದರು. ಅದರಲ್ಲಿ ಶೇ. 40ಕ್ಕಿಂತ ಕಡಿಮೆ ಅಭ್ಯರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಶೇ. 39.93 ರಷ್ಟು ಹಾಜರಾತಿ ಮಾತ್ರ ಇತ್ತು.

ಇತ್ತೀಚೆಗೆ ನಡೆದ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಈ ಪರೀಕ್ಷೆಯಲ್ಲಿ ಅತ್ಯಂತ ಕಡಿಮೆ ಹಾಜರಾತಿ ದಾಖಲಾಗಿದೆ. ಸಾಮಾನ್ಯವಾಗಿ ಶೇಕಡ 50ರಷ್ಟು ಆಸು ಪಾಸು ಹಾಜರಾತಿ ಇರುತ್ತಿತ್ತು. ಆದರೆ ಶೇಕಡ 40ಕ್ಕಿಂತ ಕಡಿಮೆ ಜನ ಗ್ರೂಪ್ ಬಿ ಪರೀಕ್ಷೆ ಬರೆದಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...