ಬಾಗಲಕೋಟೆ: ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಬಗ್ಗೆ ಕೇಂದ್ರ ಸಚಿವ ಅಮಿತ್ ಶಾ ವಿವಾದಾತ್ಮಕ ಹೇಳಿಕೆ ಖಂಡಿಸಿ ಇಂದು ಬಾಗಲಕೋಟೆ ಬಂದ್ ಗೆ ದಲಿತ ಸಂಘಟನೆಗಳು ಕರೆ ನೀಡಿವೆ.
ಬೆಳಿಗ್ಗೆ 10 ಗಂಟೆ ಸುಮಾರಿಗೆ ಬಾಗಲಕೋಟೆಯಲ್ಲಿ ಬೈಕ್ ರ್ಯಾಲಿ ಹಮ್ಮಿಕೊಳ್ಳಲಾಗಿದೆ. ಮಧ್ಯಾಹ್ನ 12 ಗಂಟೆಗೆ ಅಂಬೇಡ್ಕರ್ ವೃತ್ತದಿಂದ ಮೆರವಣಿಗೆ ನಡೆಯಲಿದೆ. ನಂತರ ಬಸವೇಶ್ವರ ವೃತ್ತದಲ್ಲಿ ಬೃಹತ್ ಪ್ರತಿಭಟನೆ ಸಮಾವೇಶ ನಡೆಸಲಾಗುವುದು.
ಬಾಗಲಕೋಟೆ, ನವನಗರ, ವಿದ್ಯಾಗಿರಿ ವ್ಯಾಪ್ತಿಯ ಸರ್ಕಾರಿ ಹಾಗೂ ಅನುದಾನಿತ ಪ್ರಾಥಮಿಕ ಮತ್ತು ಪ್ರೌಢಶಾಲೆ ಗಳಿಗೆ ಇಂದು ರಜೆ ನೀಡಲಾಗಿದೆ. ಡಿಡಿಪಿಐ ವಿವೇಕಾನಂದ ಅವರ ಸೂಚನೆಯಂತೆ ಬಾಗಲಕೋಟೆ ಬಿಇಒ ಶಾಲೆಗಳಿಗೆ ನೀಡಿದ್ದಾರೆ.