alex Certify GOOD NEWS : ರಾಜ್ಯ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ : ‘ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ’ (CLT) ಉತ್ತೀರ್ಣ ಅವಧಿ ವಿಸ್ತರಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

GOOD NEWS : ರಾಜ್ಯ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ : ‘ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ’ (CLT) ಉತ್ತೀರ್ಣ ಅವಧಿ ವಿಸ್ತರಣೆ

ಬೆಂಗಳೂರು : ರಾಜ್ಯ ಸರ್ಕಾರಿ ನೌಕರರು ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯಲ್ಲಿ ಉತ್ತೀರ್ಣರಾಗುವುದು ಕಡ್ಡಾಯವಾಗಿದ್ದು, ಈ ಪರೀಕ್ಷೆಯಲ್ಲಿ ಉತ್ತೀರ್ಣರಾಗುವ ಅವಧಿಯನ್ನು ದಿನಾಂಕ 31:12 : 2025 ರವರೆಗೆ ವಿಸ್ತರಿಸಿ ರಾಜ್ಯ ಸರ್ಕಾರ ಆದೇಶಿಸಿದೆ.

ಕರ್ನಾಟಕ ರಾಜ್ಯ ನಾಗರಿಕ ಸೇವಾ ಅಧಿನಿಯಮ, 1978 (1990 ರ ಕರ್ನಾಟಕ ಅಧಿನಿಯಮ (14) 8ನೇ ಪ್ರಕರಣದೊಂದಿಗೆ ಓದಲಾದಂತೆ, 3ನೇ ಪ್ರಕರಣದ (1)ನೇ ಉಪ-ಪ್ರಕರಣದ ಮೂಲಕ ಪ್ರದತ್ತವಾದ ಅಧಿಕಾರಗಳನ್ನು ಚಲಾಯಿಸಿ, ಕರ್ನಾಟಕ ಸರ್ಕಾರವು ರಚಿಸಿರುವ ಕರ್ನಾಟಕ ನಾಗರಿಕ ಸೇವಾ (ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ) ನಿಯಮಗಳು 2012ಕ್ಕೆ ತಿದ್ದುಪಡಿ ಮಾಡುವ ಸಲುವಾಗಿ ಈ ಕೆಳಗಿನ ನಿಯಮಗಳ ಕರಡನ್ನು, ಸದರಿ ಅಧಿನಿಯಮದ 3ನೇ ಪ್ರಕರಣದ (2)ನೇ ಉಪ ಪ್ರಕರಣದ (ಎ) ಖಂಡದ ಮೂಲಕ ಅಗತ್ಯಪಡಿಸಲಾದಂತೆ ಇದರಿಂದ ಬಾಧಿತರಾಗುವ ಸಂಭವವಿರುವ ಎಲ್ಲಾ ವ್ಯಕ್ತಿಗಳ ಮಾಹಿತಿಗಾಗಿ, ಈ ಮೂಲಕ ಪ್ರಕಟಿಸಲಾಗಿದೆ ಮತ್ತು ಸದರಿ ಕರಡನ್ನು ಅಧಿಕೃತ ರಾಜ್ಯಪತ್ರದಲ್ಲಿ ಪ್ರಕಟಗೊಂಡ ದಿನಾಂಕದಿಂದ ಹದಿನೈದು ದಿನಗಳ ನಂತರ ಪರಿಗಣನೆಗೆ ತೆಗೆದುಕೊಳ್ಳಲಾಗುವುದೆಂದು ಈ ಮೂಲಕ ಸೂಚಿಸಲಾಗಿದೆ.

ಸದರಿ ಕರಡು ನಿಯಮಗಳಿಗೆ ಸಂಬಂಧಪಟ್ಟಂತೆ ಮೇಲೆ ಗೊತ್ತುಪಡಿಸಿದ ಅವಧಿ ಕೊನೆಗೊಳ್ಳುವ ಮುಂಚೆ ಯಾರೇ ವ್ಯಕ್ತಿಯಿಂದ ರಾಜ್ಯ ಸರ್ಕಾರವು ಸ್ವೀಕರಿಸಬಹುದಾದ ಯಾವುದೇ ಆಕ್ಷೇಪಣೆ ಅಥವಾ ಸಲಹೆಯನ್ನು ರಾಜ್ಯ ಸರ್ಕಾರವು ಪರಿಗಣಿಸುತ್ತದೆ. ಆಕ್ಷೇಪಣೆಗಳು ಅಥವಾ ಸಲಹೆಗಳನ್ನು ಸರ್ಕಾರದ ಕಾರ್ಯದರ್ಶಿ, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ, ವಿಧಾನಸೌಧ, ಬೆಂಗಳೂರು-560001 ಇವರಿಗೆ ಸಲ್ಲಿಸತಕ್ಕದ್ದು.

ಕರಡು ನಿಯಮಗಳು
1. ಶೀರ್ಷಿಕೆ ಮತ್ತು ಪ್ರಾರಂಭ:- (1) ಈ ನಿಯಮಗಳನ್ನು ಕರ್ನಾಟಕ ನಾಗರಿಕ
ಸೇವಾ (ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ) (ತಿದ್ದುಪಡಿ) ನಿಯಮಗಳು, 2025 ಎಂದು ಕರೆಯತಕ್ಕದ್ದು.
(2) ಈ ನಿಯಮಗಳು ಅಧಿಕೃತ ರಾಜ್ಯ ಪತ್ರದಲ್ಲಿ ಅಂತಿಮವಾಗಿ ಪ್ರಕಟಗೊಂಡ ದಿನಾಂಕದಿಂದ ಜಾರಿಗೆ ಬರತಕ್ಕದ್ದು.
2. ನಿಯಮ 2ಕ್ಕೆ ತಿದ್ದುಪಡಿ:- ಕರ್ನಾಟಕ ನಾಗರಿಕ ಸೇವಾ (ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ)
ನಿಯಮಗಳು 2012ರ (ಇದರಲ್ಲಿ ಇನ್ನು ಮುಂದೆ ಸದರಿ ನಿಯಮಗಳೆಂದು ಉಲ್ಲೇಖಿಸಲಾಗಿದೆ) ನಿಯಮ 2ರಲ್ಲಿ “ದಿನಾಂಕ:31.12.2024 ರೊಳಗೆ” ಎಂಬ ಪದ ಮತ್ತು ಅಂಕಿಗಳ ಬದಲಿಗೆ “ದಿನಾಂಕ: 31.12.2025 ರೊಳಗೆ” ಎಂಬ ಪದ ಮತ್ತು ಅಂಕಿಗಳನ್ನು ದಿನಾಂಕ: 01.01.2025ರಿಂದ ಜಾರಿಗೆ ಬಂದಿವೆ ಎಂದು ಭಾವಿಸಿ ಪ್ರತಿಷ್ಠಾಪಿಸತಕ್ಕದ್ದು.

3. ನಿಯಮ 3ಕ್ಕೆ ತಿದ್ದುಪಡಿ :- ಸದರಿ ನಿಯಮಗಳ ನಿಯಮ 3ರಲ್ಲಿ,
(ಎ) ಉಪ ನಿಯಮ (1)ರಲ್ಲಿ “ದಿನಾಂಕ: 31.12.2024 ರೊಳಗೆ”, ಎಂಬ ಪದ ಮತ್ತು ಅಂಕಿಗಳ ಬದಲಿಗೆ “ದಿನಾಂಕ:31.12.2025 ರೊಳಗೆ”, ಎಂಬ ಪದ ಮತ್ತು ಅಂಕಿಗಳನ್ನು ದಿನಾಂಕ: 01.01.2025ರಿಂದ ಜಾರಿಗೆ ಬಂದಿವೆ ಎಂದು ಭಾವಿಸಿ ಪ್ರತಿಸ್ಥಾಪಿಸತಕ್ಕದ್ದು ಮತ್ತು
(ಬಿ) ಉಪ ನಿಯಮ (2)ರಲ್ಲಿ “ದಿನಾಂಕ: 31.12.2024ರೊಳಗೆ”, ಎಂಬ ಪದ ಮತ್ತು ಅಂಕಿಗಳ ಬದಲಿಗೆ “ದಿನಾಂಕ: 31.12.2025ರೊಳಗೆ”, ಎಂಬ ಪದ ಮತ್ತು ಅಂಕಿಗಳನ್ನು ದಿನಾಂಕ: 01.01.2025ರಿಂದ ಜಾರಿಗೆ ಬಂದಿವೆ ಎಂದು ಭಾವಿಸಿ ಪ್ರತಿಸ್ಥಾಪಿಸತಕ್ಕದ್ದು ಎಂದು ಆದೇಶ ಹೊರಡಿಸಿದೆ.

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...