ಬೆಂಗಳೂರು: ಕಸ್ಟಮ್ಸ್ ಹಾಗೂ ಇಡಿ ಅಧಿಕಾರಿಗಳು ಎಂದು ಸಾಫ್ಟ್ ವೇರ್ ಇಂಜಿನಿಯರ್ ಓರ್ವರಿಗೆ ಬೆದರಿಸಿ 11 ಕೋಟಿ ರೂಪಾಯಿ ಸುಲಿಗೆ ಮಾಡಿದ್ದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಬೆಂಗಳೂರು ಈಶಾನ್ಯ ವಿಭಾಗದ ಪೊಲೀಸರು ಯಶಸ್ವಿಯಾಗಿದ್ದಾರೆ.
ಕರಣ್, ತರುಣ್ ನಟಾನಿ ಹಾಗೂ ಧವಲ್ ಶಾ ಬಂಧಿತ ಆರೋಪಿಗಳು. ಒಂದು ತಿಂಗಳ ಕಾಲ ನಿರಂತರವಾಗಿ ಕಾಟಕೊಟ್ಟು ಅಧಿಕಾರಿಗಳ ಹೆಸರಲ್ಲಿ ವಿವಿಧ ಖಾತೆಗಳಿಗೆ ಹಣ ಹಾಕಿಸಿಕೊಂಡು ಬರೋಬ್ಬರಿ 11 ಕೋಟಿ ರೂಪಾಯಿ ಹಣವನ್ನು ಆರೋಪಿಗಳು ವಂಚಿಸಿದ್ದರು.
ಈ ಬಗ್ಗೆ ಟೆಕ್ಕಿ ಈಶಾನ್ಯ ಭಾಗದ ಸಿಇಎನ್ ಠಾಣೆಯಲ್ಲಿ ದೂರು ನೀಡಿದ್ದರು. ತನಿಖೆ ನಡೆಸಿದ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.