ಮಂಡ್ಯ: ಚಾಲಕನ ನಿಯಂತ್ರಣ ತಪ್ಪಿದ ಕೆ.ಎಸ್.ಆರ್.ಟಿ.ಸಿ ಬಸ್ ಪಲ್ಟಿಯಾಗಿ ಬಿದ್ದ ಪರಿಣಾಮ 30ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರುವ ಘಟನೆ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ರುದ್ರಾಕ್ಷಿಪುರ ಗ್ರಾಮದಲ್ಲಿ ನಡೆದಿದೆ.
ಕೊಳ್ಳೆಗಾಲದಿಂದ ಬೆಂಗಳೂರಿಗೆ ಬರುತ್ತಿದ್ದ ಬಸ್, ರುದ್ರಾಕ್ಷಿಪುರ ಗ್ರಾಮದ ಬಳಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿಹೊಡೆದು, ಪಲಿಯಾಗಿ ಬಿದ್ದಿದೆ. ಬಸ್ ನಲ್ಲಿದ್ದ 30ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ.
ಗಾಯಾಳುಗಳನ್ನು ಮದ್ದೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.