ಬೆಂಗಳೂರು: ಬೀದರ್ ಹಾಗೂ ಮಂಗಳೂರಿನಲ್ಲಿ ನಡೆದಿರುವ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶೀಘ್ರದಲ್ಲೇ ಆರೋಪಿಗಳನ್ನು ಬಂಧಿಸಲಾಗುವುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಪರಮೇಶ್ವರ್, ಬೀದರ್ ಎಟಿಎಂ ಹಾಗೂ ಮಂಗಳೂರಿನ ಬ್ಯಾಂಕ್ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ಮಾಹಿತಿ ಕಲೆಹಾಕಲಾಗುತ್ತಿದೆ. ಶೀಘ್ರದಲ್ಲೇ ಅವರನ್ನು ಬಂಧಿಸಲಾಗುವುದು ಎಂದರು.
ಮಂಗಳೂರು ಕೇಸ್ ನಲ್ಲಿ ಎರಡು ಕಾರುಗಳು ಬಂದಿರುವ ಮಾಹಿತಿ ಇದೆ ಎರಡೂ ಕೇಸ್ ನಲ್ಲಿಯೂ ಪೊಲೀಸರು ನಿಖರ ಮಾಹಿತಿಗಳನ್ನು ಕಲೆ ಹಾಕಿದ್ದಾರೆ. ಈಗಗಾಲೇ 4-5 ಟೀಂ ಗಳನ್ನು ವಿವಿಧ ರಾಜ್ಯಗಳಿಗೆ ಕಳುಹಿಸಲಾಗಿದೆ. ಎರಡೂ ಪ್ರಕರಣಗಳಲ್ಲಿ ಬೇರೆ ರಾಜ್ಯದವರು ಮಾಡಿರುವ ಕೃತ್ಯ ಎಂಬ ಮಾಹಿತಿ ಇದೆ. ಯಾರು? ಎಲ್ಲಿಯವರು ಎಂಬುದು ತನಿಖೆಯಿಂದ ಗೊತ್ತಾಗಲಿದೆ ಎಂದರು ಹೇಳಿದರು.