HomeKarnatakaಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಚುನಾವಣೆ: ನಮ್ಮ ಬಣದಿಂದ ಅಭ್ಯರ್ಥಿಯನ್ನು ಕಣಕ್ಕಿಳಿಸುತ್ತೇವೆ: ಶಾಸಕ ಯತ್ನಾಳ್

ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಚುನಾವಣೆ: ನಮ್ಮ ಬಣದಿಂದ ಅಭ್ಯರ್ಥಿಯನ್ನು ಕಣಕ್ಕಿಳಿಸುತ್ತೇವೆ: ಶಾಸಕ ಯತ್ನಾಳ್

ಹುಬ್ಬಳ್ಳಿ: ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆಯಾಗಲೇಬೇಕು. ಅಧ್ಯಕ್ಷರ ಚುನಾವಣೆಯಲ್ಲಿ ನಮ್ಮ ಬಣದ ಅಭ್ಯರ್ಥಿಯನ್ನು ನಾವು ಕಣಕ್ಕಿಳಿಸುತ್ತೇವೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.

ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಯತ್ನಾಳ್, ಶಾಸಕ ರಮೇಶ್ ಜಾರಕಿಹೊಳಿ ಜೊತೆ ಚರ್ಚಿಸಿ ನಾವು ನಮ್ಮ ಅಭ್ಯರ್ಥಿಯನ್ನು ಅಂತಿಮಗೊಳಿಸುತ್ತೇವೆ ಎಂದರು.

ಹೈಕಮಾಂಡ್ ನವರು ವಿಜಯೇಂದ್ರ ಅವರನ್ನು ಯಾಕೆ ಅಧ್ಯಕ್ಷರನ್ನಾಗಿ ಮಾಡಿದ್ದಾರೆ ಗೊತ್ತಿಲ್ಲ. ಪಕ್ಷದ ಹಿತದೃಷ್ಟಿಯಿಂದ ಅವರನ್ನು ಬದಲಾಯಿಸಬೇಕು. ವಂಶಾಡಳಿತ ಹಾಗೂ ಭ್ರಷ್ಟಾಚಾರದ ವಿರುದ್ಧ ನಾವು ಹೋರಾಟ ನಡೆಸುತ್ತಿದ್ದೇವೆ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಯಡಿಯೂರಪ್ಪ ಸಿಎಂ ಆಗಿದ್ದಾಗ ಹಲವು ಕಡತಗಳಿಗೆ ವಿಜಯೇಂದ್ರ ಅವರೇ ಯಡಿಯೂರಪ್ಪನವರ ಸಹಿ ಮಾಡಿದ್ದಾರೆ. ಈ ಬಗ್ಗೆ ತನಿಖೆಯಾಗಲಿ ಎಂದು ಹೇಳಿದರು.

 

For Latest News Updates, Join Our Whatsapp Community🚩
RELATED ARTICLES

Most Popular