ಬೆಂಗಳೂರು: ಜಾರಿ ನಿರ್ದೇಶನಲಯ ಅಧಿಕಾರಿಗಳು ಮುಡಾ ನಿವೇಶನಗಳನ್ನು ಮುಟ್ಟುಗೋಲು ಹಾಕಿರುವ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಇದೇ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ.
ಇಡಿ ಪತ್ರಿಕಾ ಪ್ರಕಟನೆ ವಿಚಾರವಾಗಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಇಡಿ ಅಧಿಕಾರಿಗಳ ಮಾಧ್ಯಮ ಪ್ರಕಟಣೆಗೂ ನನಗೂ ಸಂಬಂಧವಿಲ್ಲ. ರಾಜಕೀಯ ಉದ್ದೇಶದಿಂದ ತನಿಖೆ ಮಾಡುತ್ತಿದ್ದಾರೆ. 50:50 ಸೈಟ್ ಗಳನ್ನು ಮುಟ್ಟುಗೋಲು ಹಾಕಿದ್ದೇವೆ ಎನ್ನುತ್ತಿದ್ದಾರೆ. ಅದಕ್ಕೂ ನನಗೂ ಸಂಬಂಧವಿಲ್ಲ ಎಂದು ಹೇಳಿದರು.
ಬಿಜೆಪಿ ಇಡಿಯಿಂದ ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿಸಿದೆ. ಇಡಿ ಮಾಧ್ಯಮ ಪ್ರಕಟಣೆ ರಾಜಕೀಯ ಪ್ರೇರಿತ ಎಂದು ವಾಗ್ದಾಳಿ ನಡೆಸಿದರು.