ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ಬಣ ಬಡಿದಾಟ ತೀವ್ರಗೊಂಡಿದ್ದು, ಈ ನಡುವೆ ವರಿಷ್ಠರು ಎಂಟ್ರಿಕೊಡುತ್ತಿದ್ದಾರೆ. ನಾಳೆ ಬಿಜೆಪಿ ರಾಜ್ಯ ಉಸ್ತುವಾರಿ ರಾಧಾಮೋಹನ್ ದಾಸ್ ಅಗರ್ವಾಲ್ ರಾಜ್ಯಕ್ಕೆ ಆಗಮಿಸಲಿದ್ದಾರೆ.
ಬಣ ಬಡಿದಾಟ, ರಾಜ್ಯಾಧ್ಯಕ್ಷರ ಬದಲಾವಣೆ ಚರ್ಚೆ ಬೆನ್ನಲ್ಲೇ ರಾಜ್ಯಕ್ಕೆ ಆಗಮಿಸುತ್ತಿರುವ ರಾಧಾಮೋಹನ್ ದಾಸ್, ಮೂರು ಪ್ರಮುಖ ಸಭೆಗಳನ್ನು ನಡೆಸಲಿದ್ದಾರೆ. ನಾಳೆ ಮಧ್ಯಾಹ್ನ 3 ಗಂಟೆಗೆ ಶಾಸಕರು, ಸಂಸದ ಸಭೆ ನಡೆಸಿ ಅಭಿಪ್ರಾಯ ಸಂಗ್ರಹಿಸಲಿದ್ದಾರೆ. ಸಂಜೆ 4 ಗಂಟೆಗೆ ಸಂಘಟನೆ ಪರ್ವದ ಪರಿಶೀಲನೆ ನಡೆಸಿದ್ದಾರೆ. ಜಿಲ್ಲಾಧ್ಯಕ್ಷ ಹಾಗೂ ರಾಜ್ಯಾಧ್ಯಕ್ಷ ಚುನಾವಣೆ ಬಗ್ಗೆ ಚರ್ಚಿಸಲಿದ್ದಾರೆ. ಬಳಿಕ ಸಂಜೆ 7 ಗಂಟೆಗೆ ಕೋರ್ ಕಮಿಟಿ ಸಭೆ ನಡೆಸಲಿದ್ದಾರೆ.
ಈ ವೇಳೆ ಯತ್ನಾಳ್ ಬಣ ಹಾಗೂ ವಿಜಯೇಂದ್ರ ಬಣಗಳ ಹೇಳಿಕೆ ಬಗ್ಗೆ ಚರ್ಚೆ ನಡೆಯಲಿದೆ ಎಂದು ಹೇಳಲಾಗುತ್ತಿದೆ.