alex Certify ಸ್ತ್ರೀಶಕ್ತಿ ಗುಂಪುಗಳಿಂದ ಪ್ರಶಸ್ತಿಗೆ ಅರ್ಜಿ ಆಹ್ವಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸ್ತ್ರೀಶಕ್ತಿ ಗುಂಪುಗಳಿಂದ ಪ್ರಶಸ್ತಿಗೆ ಅರ್ಜಿ ಆಹ್ವಾನ

ಮಡಿಕೇರಿ:-ಪ್ರಸಕ್ತ (2024-25) ಸಾಲಿನಲ್ಲಿ ಸ್ತ್ರೀಶಕ್ತಿ ಯೋಜನೆಯಡಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸಿದ ಸ್ತ್ರೀಶಕ್ತಿ ಗುಂಪುಗಳಿಗೆ ಹಾಗೂ ತಾಲ್ಲೂಕು ಒಕ್ಕೂಟಗಳಿಗೆ ಪ್ರತಿ ವರ್ಷದಂತೆ ಪ್ರಸಕ್ತ ವರ್ಷದಲ್ಲೂ ಸಹ ಸ್ತ್ರೀಶಕ್ತಿ ಯೋಜನೆಯಡಿ ಅತ್ಯುತ್ತಮವಾಗಿ ಕಾರ್ಯ ನಿರ್ವಹಿಸಿದ ಸ್ತ್ರೀ ಶಕ್ತಿ ಗುಂಪುಗಳಿಗೆ/ ಒಕ್ಕೂಟಗಳಿಗೆ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯಂದು ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ.

2024-25ನೇ ಸಾಲಿನಲ್ಲಿ ಕೊಡಗು ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿರುವ ಸ್ತ್ರೀಶಕ್ತಿ ಗುಂಪು/ಒಕ್ಕೂಟಗಳ ಪ್ರಸ್ತಾವನೆಯನ್ನು ಜನವರಿ, 22 ರೊಳಗೆ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳ ಕಚೇರಿ ಮಡಿಕೇರಿ, ಸೋಮವಾರಪೇಟೆ ಮತ್ತು ಪೊನ್ನಂಪೇಟೆ ಈ ಕಚೇರಿಗೆ ಸಲ್ಲಿಸತಕ್ಕದ್ದು. ಹೆಚ್ಚಿನ ಮಾಹಿತಿಗೆ ಮೊಬೈಲ್ ಸಂಖ್ಯೆ 9108810782, 9343525589, 9483110552 ನ್ನು ಸಂಪರ್ಕಿಸಬಹುದು ಎಂದು ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.

 

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...