ಬೆಳಗಾವಿ : ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಸರ್ಕಾರ ನಾಳೆ ಗಾಂಧಿ ಭಾರತ ಕಾರ್ಯಕ್ರಮ ಆಯೋಜಿಸಿದೆ.
ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದು, ರಾಷ್ಟ್ರದ ಇಂದಿನ ಅಗತ್ಯವೆಂದರೆ, ಅದು.. ಗಾಂಧಿ ಆದರ್ಶಗಳನ್ನು ಅನುಸರಿಸುವುದು ಗಾಂಧಿ ತತ್ವಗಳನ್ನು ಅಳವಡಿಸಿಕೊಳ್ಳುವುದು ಗಾಂಧಿ ಕನಸನ್ನು ನನಸಾಗಿಸುವುದು ಮಹಾತ್ಮ ಗಾಂಧಿಯವರ ಅಧ್ಯಕ್ಷತೆಯಲ್ಲಿ ನಡೆದ 1924ರ ಬೆಳಗಾವಿ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವದ ಸ್ಮರಣಾರ್ಥವಾಗಿ ಜನವರಿ 21ರ ಮಂಗಳವಾರ ಬೆಳಿಗ್ಗೆ 10.30 ರಿಂದ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಆಯೋಜಿಸಿರುವ ಗಾಂಧಿ ಭಾರತ ಕಾರ್ಯಕ್ರಮಕ್ಕೆ ತಮ್ಮೆಲ್ಲರಿಗೂ ಆದರದ ಸ್ವಾಗತ ಎಂದು ಟ್ವೀಟ್ ಮಾಡಿದ್ದಾರೆ.
ಮಹಾತ್ಮ ಗಾಂಧೀಜಿ ಅವರ ಅಧ್ಯಕ್ಷತೆಯಲ್ಲಿ ನಡೆದ 1924ರ ಬೆಳಗಾವಿ ಕಾಂಗ್ರೆಸ್ ಸಮಾವೇಶದ ಶತಮಾನೋತ್ಸವದ ಸ್ಮರಣಾರ್ಥವಾಗಿ ಜನವರಿ 21ರಂದು ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯಲಿರುವ ಮಹಾತ್ಮ ಗಾಂಧೀಜಿ ಪ್ರತಿಮೆಯ ಅನಾವರಣ ಸಮಾರಂಭದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ.ಗಾಂಧಿ ಭಾರತವನ್ನು ಮರುನಿರ್ಮಿಸಲು ನಮ್ಮೊಂದಿಗೆ ಕೈಜೋಡಿಸಿ ಎಂದಿದ್ದಾರೆ.
ರಾಷ್ಟ್ರದ ಇಂದಿನ ಅಗತ್ಯವೆಂದರೆ, ಅದು..
ಗಾಂಧಿ ಆದರ್ಶಗಳನ್ನು ಅನುಸರಿಸುವುದು
ಗಾಂಧಿ ತತ್ವಗಳನ್ನು ಅಳವಡಿಸಿಕೊಳ್ಳುವುದು
ಗಾಂಧಿ ಕನಸನ್ನು ನನಸಾಗಿಸುವುದುಮಹಾತ್ಮ ಗಾಂಧಿಯವರ ಅಧ್ಯಕ್ಷತೆಯಲ್ಲಿ ನಡೆದ 1924ರ ಬೆಳಗಾವಿ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವದ ಸ್ಮರಣಾರ್ಥವಾಗಿ ಜನವರಿ 21ರ ಮಂಗಳವಾರ ಬೆಳಿಗ್ಗೆ 10.30 ರಿಂದ ಬೆಳಗಾವಿಯ ಸುವರ್ಣ… pic.twitter.com/i6n6jYObyo
— Siddaramaiah (@siddaramaiah) January 20, 2025