ಬೆಂಗಳೂರು: ಕಾಂತಾರಾ-2 ಸಿನಿಮಾ ಚಿತ್ರಿಕರಣದ ವೇಳೆ ಅರಣ್ಯ ಭೂಮಿಗೆ ಹಾನಿ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿತ್ತು. ಇದೀಗ ಈ ಬಗ್ಗೆ ಸ್ವತಃ ಸಚಿವ ಈಶ್ವರ ಖಂಡ್ರೆ ಸ್ಪಷ್ಟನೆ ನೀಡಿದ್ದಾರೆ.
ಕಾಂತಾರಾ-2 ಸಿನಿಮಾ ಶೂಟಿಂಗ್ ವೇಳೆ ಅರಣ್ಯ ಭೂಮಿ ನಿಯಮ ಉಲ್ಲಂಘನೆಯಾಗಿಲ್ಲ. ಚಿತ್ರೀಕರಣಕ್ಕೆ ನಿಯಮಾವಳಿ ಪ್ರಕಾರ ಅನುಮತಿ ನೀಡಲಾಗಿದೆ. ಅರಣ್ಯ ಭೂಮಿಯಲ್ಲಿ ಚಿತ್ರೀಕರಣ ಮಾಡಿಲ್ಲ. ಕಂದಾಯ ಜಮೀನಿನಲ್ಲಿ ಚಿತ್ರೀಕರಣ ಮಾಡಿದ್ದಾರೆ ಎಂದು ಪ್ರಾಥಮಿಕ ವರದಿ ಬಂದಿದೆ ಎಂದರು.
ಆದಾಗ್ಯೂ ಸಂಪೂರ್ಣ ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ತಿಳಿಸಿದರು.