ರಾಮನಗರ: ಅವಾಚ್ಯ ಶಬ್ದಗಳಿಂದ ನಿಂದಿಸಿ ಸಾಲಗಾರರಿಗೆ ಕಿರುಕುಳ ನೀಡುತ್ತಿದ್ದ ಆರೋಪದಲ್ಲಿ ಮೈಕ್ರೋ ಫೈನಾನ್ಸ್ ಕಂಪನಿ ಮ್ಯಾಜೇರ್ ಓರ್ವನನ್ನು ಪೊಲೀಸರು ಬಂಧಿಸಿರುವ ಘಟನೆ ರಾಮನಗರದಲ್ಲಿ ನಡೆದಿದೆ.
ಜಿಲ್ಲೆಯ ಕೋನಮುದ್ದಹಳ್ಳಿ ಗ್ರಾಮದಲ್ಲಿ ಸಾಲಗಾರರಿಗೆ ಮ್ಯಾನೇಜ್ ಕಿರುಕುಳ ನೀಡುತ್ತಿದ್ದ. ಸಲ ಮರು ಪಾವತಿ ಮಾಡುವಂತೆ ಅವಾಚ್ಯ ಶಬ್ಧಗಳಿಂದ ನಿಂದಿಸಿ ಬೆದರಿಕೆ ಹಾಕುತ್ತಿದ್ದ. ಇದರಿಂದ ನೊಂದ ಸಾಲಗಾರರು ರಾಮನಗರ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ಈ ಹಿನ್ನೆಲೆಯಲ್ಲಿ ಬಿಡದಿಯ ಖಾಸಗಿ ಫೈನಾನ್ಸ್ ಕಂಪನಿ ಮ್ಯಾನೇಜರ್ ನನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಈ ಬಗ್ಗೆ ಮಾತನಾಡಿರುವ ರಾಮನಗರ ಎಸ್ ಪಿ ಶ್ರೀನಿವಾಸ್ ಗೌಡ ಯಾವುದೇ ಫೈನಾನ್ಸ್ ಕಂಪನಿಗಳು ಆರ್ ಬಿಐ ಗೈಡ್ ಲೈನ್ ಮೀರಿ ಸಾಲಗಾರರಿಗೆ ಕಿರುಕುಳ ನೀಡಬಾರದು. ಅಲ್ಲದೇ ಮನೆ ಬಳಿ ತೆರಳಿ ಮಾನಸಿಕ ಹಿಂಸೆ ಕಿರುಕುಳ ನೀಡುವಂತಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.