ಬೆಳಗಾವಿ: ನಾಳೆ ಬೆಳಗಾವಿಯಲ್ಲಿ ಗಾಂಧಿ ಭಾರತ ಸಮಾವೇಶ ಕಾರ್ಯಕ್ರಮ ಹಿನ್ನೆಲೆಯಲ್ಲಿ ಶಾಲೆಗಳು ಹಾಗೂ ಅಂಗನವಾಡಿ ಕೇಂದ್ರಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ನಾಳೆ ಜನವರಿ 21ರಂದು ಬೆಳಗಾವಿ ಸುವರ್ಣ ವಿಧಾನಸೌಧದ ಮುಂದೆ ರಾಷ್ಟ್ರಪತಿ ಮಹಾತ್ಮಾ ಗಾಂಧೀಜಿ ಪುತ್ಥಳಿ ಅನಾವರಣ ಸಮಾರಂಭ ಜರುಗಲಿದೆ ಈ ಹಿನ್ನೆಲೆಯಲ್ಲಿ ಬೆಳಗಾವಿ ನಗರ, ಬೆಳಗಾವಿ ತಾಲೂಕಿನ ಎಲ್ಲಾ ಅಂಗನವಾಡಿ ಹಾಗೂ ಸರ್ಕಾರಿ, ಅನುದಾನಿತ, ಅನುದಾನ ರಹಿತ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ತಿಳಿಸಿದ್ದಾರೆ.