ಮಂಗಳೂರು: ಮಂಗಳೂರಿನ ಕೋಟೆಕಾರು ಬ್ಯಾಂಕ್ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.
ಮಂಗಳೂರಿನ ಕೋಟೆಕಾರು ಸಹಕಾರಿ ಬ್ಯಾಂಕ್ ನಲ್ಲಿ ಚಿನ್ನಾಭರಣ, ನಗದು ಹಣ ದೋಚಿ ಪರಾರಿಯಾಗಿದ್ದ ಪ್ರಕರಣ ಸಂಬಂಧ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಕಮಿಷ್ನರ್ ಅನುಪಮ್ ಅಗರ್ವಾಲ್ ತಿಳಿಸಿದ್ದಾರೆ.
ಜನವರಿ 17ರಂದು ಮಂಗಳೂರಿನ ಕೋಟೆಕಾರು ಬ್ಯಾಂಕ್ ನಲ್ಲಿ ದರೋಡೆ ನಡೆದಿತ್ತು. ಬ್ಯಾಂಕ್ ದರೋಡೆ ಬಳಿಕ ಆರೋಪಿಗಳು ತಮಿಳುನಾಡಿನ ತಿರುವನ್ವೇಲಿಗೆ ಹೋಗಿದ್ದರು. ಸದ್ಯ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತರಿಂದ ಎರಡು ಗೋಣಿಚೀಲ, ತಲ್ವಾರ್, 2 ಪಿಸ್ತೂಲ್ ಜಪ್ತಿ ಮಾಡಲಾಗಿದೆ ಎಂದು ತಿಳಿಸಿದ್ದಾರೆ.