alex Certify ಪೋಷಕರೇ ಗಮನಿಸಿ : ‘ರಾಷ್ಟ್ರೀಯ ಇಂಡಿಯನ್ ಮಿಲಿಟರಿ’ ಕಾಲೇಜಿನಲ್ಲಿ 8ನೇ ತರಗತಿ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪೋಷಕರೇ ಗಮನಿಸಿ : ‘ರಾಷ್ಟ್ರೀಯ ಇಂಡಿಯನ್ ಮಿಲಿಟರಿ’ ಕಾಲೇಜಿನಲ್ಲಿ 8ನೇ ತರಗತಿ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನ

ಉತ್ತರಾಖಂಡ ರಾಜ್ಯದ ಡೆಹರಾಡೂನಲ್ಲಿರುವ ರಾಷ್ಟ್ರೀಯ ಇಂಡಿಯನ್ ಮಿಲಿಟರಿ ಕಾಲೇಜ್ನಲ್ಲಿ 2026ನೇ ಸಾಲಿನ 8ನೇ ತರಗತಿಗಾಗಿ ಪ್ರವೇಶ ಬಯಸುವ ಕರ್ನಾಟಕ ರಾಜ್ಯದ ಬಾಲಕ ಮತ್ತು ಬಾಲಕಿಯರಿಗೆ ಅರ್ಹತಾ ಪ್ರವೇಶ ಪರೀಕ್ಷೆಯನ್ನು ಬೆಂಗಳೂರು ಕೇಂದ್ರದಲ್ಲಿ 2025 ರ ಜೂನ್ 01 ರಂದು ನಡೆಯಲಿದ್ದು, ಆಸಕ್ತರಿಂದ ಆರ್ಜಿ ಆಹ್ವಾನಿಸಲಾಗಿದೆ.

ಅಭ್ಯರ್ಥಿಗಳು ಸರ್ಕಾರದಿಂದ ಮಾನ್ಯತೆ ಪಡೆದ ಯಾವುದೇ ಶಾಲೆಯಲ್ಲಿ 7ನೇ ತರಗತಿಯಲ್ಲಿ ಓದುತ್ತಿರಬೇಕು ಅಥವಾ ಉತ್ತೀರ್ಣರಾಗಿರಬೇಕು ಹಾಗೂ ದಿನಾಂಕ 01-01-2026 ರಂತೆ 111/2 ವರ್ಷದಿಂದ 13 ವರ್ಷದೊಳಗಿರಯವ ಅಂದರೆ (ದಿನಾಂಕ 02-01-2013 ರಿಂದ 01-07-2014 ರೊಳಗೆ ಜನಿಸಿರುವ) ಬಾಲಕರು ಮತ್ತು ಬಾಲಕಿಯರು ಮಾತ್ರ ಅರ್ಹರಿರುತ್ತಾರೆ.

ಈ ಸಂಸ್ಥೆಯ ಮುಖ್ಯ ಗುರಿ ಯುವಕರನ್ನು ದೇಶದ ಸಶಸ್ತç ಪಡೆಗೆ ಸೇರಲು ಸಿದ್ದಗೊಳಿಸುವುದು ಹಾಗೂ ಈ ನಿಟ್ಟಿನಲ್ಲಿ ಸರ್ವ ರೀತಿಯ ವಿದ್ಯಾಭ್ಯಾಸ/ತರಬೇತಿ ನೀಡುವುದು.ಕಾಲೇಜಿನಲ್ಲಿ ವರ್ಷವೊಂದಕ್ಕೆ ವಿದ್ಯಾಭ್ಯಾಸದ ಶುಲ್ಕ ರೂ. 98,650/-ಗಳು (ಸಾಮಾನ್ಯ ವರ್ಗ) ಹಾಗೂ ರೂ. 81,850/-(ಎಸ್ಟಿ/ಎಸ್ಟಿ) ಗಳಾಗಿರುತ್ತದೆ. ಇದು ಕಾಲಕಾಲಕ್ಕೆ ಹೆಚ್ಚಾಗಬಹುದು. ವಿಧ್ಯಾರ್ಥಿ ಮತ್ತು ವಿಧ್ಯಾರ್ಥಿನಿಯು ಪ್ರವೇಶ ಸಮಯದಲ್ಲಿ ರೂ 50,000/- ಗಳನ್ನು ಭದ್ರತಾ ಠೇವಣಿ ನೀಡಬೇಕಾಗುತ್ತದೆ. ಮೊತ್ತವನ್ನು ವಿದ್ಯಾರ್ಥಿಯು ಪದವೀಧರನಾದ ಮತ್ತು ವಿದ್ಯಾರ್ಥಿನಿಯು ಪದವೀಧರರೆಯಾದ ಬಳಿಕ ಹಿಂತಿರುಗಿಸಲಾಗುವುದು.

*ಅರ್ಜಿ ನಮೂನೆ ಪಡೆಯುವ ವಿಧಾನ

ಪ್ರಾಸ್ಪೆಕ್ಟಸ್, ಅರ್ಜಿ ನಮೂನೆ ಮತ್ತು ಹಳೆಯ ಪ್ರಶ್ನೆ ಪತ್ರಿಕೆಗಳ ಕಿರುಪುಸ್ತಕವನ್ನು ರಾಷ್ಟಿçÃಯ ಭಾರತೀಯ ಮಿಲಟರಿ ಕಾಲೇಜು, ಗರಹಿ ಕ್ಯಾಂಟ್, ಡೆಹ್ರಾಡೂನ್, ಉತ್ತರಾಖಂಡ್, ಪಿನ್-248003 ಮೂಲಕ ಪಡೆಯಬಹುದು.
*ಆನ್ಲೈನ್ ಪಾವತಿ:*
ಸಾಮಾನ್ಯ ಅಭ್ಯರ್ಥಿಗಳಿಗೆ ರೂ.600/- ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ ರೂ.555/- ಇದ್ದು, ಆನ್ಲೈನ್ ಪಾವತಿ ಮಾಡುವ ಮೂಲಕ ಪ್ರಾಸ್ಪೆಕ್ಟಸ್ ಕಮ್ ಅರ್ಜಿ ನಮೂನೆ ಮತ್ತು ಹಳೆಯ ಪ್ರಶ್ನೆ ಪತ್ರಿಕೆಗಳ ಕಿರು ಪುಸ್ತಕಗಳನ್ನು ಸಹ ಪಡೆಯಬಹುದು.
ವೆಬ್ಸೈಟ್ www.rimc.gov.in ಪಾವತಿ ಸ್ವೀಕರಿಸಿದ ನಂತರ ಪ್ರಾಸ್ಪೆಕ್ಟಸ್ ಕಮ್ ಅರ್ಜಿ ನಮೂನೆ ಮತ್ತು ಹಳೆಯ ಪ್ರಶ್ನೆ ಪತ್ರಿಕೆಗಳ ಕಿರುಪುಸ್ತಕಗಳನ್ನು ಸ್ಪೀಡ್ ಪೋಸ್ಟ್ ಮೂಲಕ ರವಾನಿಸಲಾಗುತ್ತದೆ.

*ಬೇಡಿಕೆ ಕರಡು ಕಳುಹಿಸುವ ವಿಧಾನ:
ಪ್ರಾಸ್ಪೆಕ್ಟಸ್ ಕಮ್ ಅರ್ಜಿ ನಮೂನೆ ಮತ್ತು ಹಳೆಯ ಪ್ರಶ್ನೆ ಪತ್ರಿಕೆಗಳ ಕಿರುಪುಸ್ತವನ್ನು ಸಾಮಾನ್ಯ ಅಭ್ಯರ್ಥಿಗಳಿಗೆ ರೂ.600/-ಗಳ ಬೇಡಿಕೆಯ ಕರಡು ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ ರೂ.555/-ಗಳ ಬೇಡಿಕೆಯ ಕರಡು ಕಳುಹಿಸಿ ಲಿಖಿತ ವಿನಂತಿಯ ಪರವಾಗಿ ಜಾತಿ ಪ್ರಮಾಣ ಪತ್ರದೊಂದಿಗೆ “THE COMMANDANT RIMC FUND” PAYABLE AT HDFC BANK, BALLUPUR CHOWK, DEHRADUN (BANK CODE. 1399), UTTARAKHAND ಈ ವಿಳಾಸಕ್ಕೆ ಕಳುಹಿಸಬಹುದು. ಪಿನ್ ಕೋಡ್ ಮತ್ತು ಸಂಪರ್ಕ ಸಂಖ್ಯೆಯೊAದಿಗೆ ದೊಡ್ಡ ಅಕ್ಷರಗಳಲ್ಲಿ ಟೈಪ್ ಮಾಡಿ ಬರೆಯಬೇಕು. ಕಾನೂನು ಬಾಹಿರ ಅಥವಾ ಅಪೂರ್ಣ ವಿಳಾಸದಿಂದ ಉಂಟಾಗುವ ಪ್ರಾಸ್ಪೆಕ್ಟಸ್ನ ಸಾಗಾಣಿಕೆಯಲ್ಲಿ ಯಾವುದೇ ಅಂಚೆ ವಿಳಂಬ ಅಥವಾ ನಷ್ಟಕ್ಕೆ ಖIಒS ಸಂಸ್ಥೆಯು ಜವಾಬ್ದಾರರಾಗಿರುವುದಿಲ್ಲ.

ಭರ್ತಿ ಮಾಡಿದ ನಿಗದಿತ ಅರ್ಜಿ ನಮೂನೆಯನ್ನು ದ್ವಿಪ್ರತಿಯಲ್ಲಿ ಮಾರ್ಚ್ 31 ರೊಳಗಾಗಿ ನಿರ್ದೇಶಕರು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಫೀಲ್ಡ್ ಮಾರ್ಷಲ್ ಕೆ ಎಮ್ ಕಾರ್ಯಪ್ಪ ಭವನ್, ನಂ, 58 ಫೀಲ್ಡ್ ಮಾರ್ಷಲ್ ಕೆ ಎಮ್ ಕಾರ್ಯಪ್ಪ ರಸ್ತೆ, ಬೆಂಗಳೂರು-25 ಇವರಿಗೆ ಸಲ್ಲಿಸಬೇಕು.

*ಬೇಕಾದ ದಾಖಲೆಗಳು:*
ಮುನ್ಸಿಪಾಲಿಟಿ, ಗ್ರಾಮ ಪಂಚಾಯತ್ ಪ್ರಾಧಿಕಾರ ವತಿಯಿಂದ ಆಂಗ್ಲ ಭಾಷೆಯಲ್ಲಿ ಪಡೆದ ಅಭ್ಯರ್ಥಿಯ ಜನ್ಮ ಪ್ರಮಾಣ ಪತ್ರದ ಧೃಢೀಕೃತ ಪ್ರತಿ. 5 ಪಾಸಪೋರ್ಟ್ ಅಳತೆಯ ಭಾವಚಿತ್ರಗಳು (ಅರ್ಜಿಯಲ್ಲಿ ಅಂಟಿಸಿದ ಭಾವಚಿತ್ರವನ್ನು ಸೇರಿಸಿ). ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರು, ಸಕ್ಷಮ ಪ್ರಾಧಿಕಾರದಿಂದ ನೀಡಿದ ಜಾತಿ ಪ್ರಮಾಣ ಪತ್ರದ ದೃಡೀಕೃತ (ಪ್ರತಿ ಆಂಗ್ಲ ಭಾಷೆಯಲ್ಲಿ ಇರುವಂತೆ). ಪರೀಕ್ಷಾ ಪ್ರವೇಶ ಪತ್ರವನ್ನು ತ್ವರಿತ ಅಂಚೆದ್ವಾರ ರವಾನಿಸಲು ರೂ.42/- ರ ಅಂಚೆ ಚೀಟಿ ಲಗತ್ತಿದ ಸ್ವವಿಳಾಸ ಲಕೋಟೆ.
ಮುಖ್ಯೋಪಾಧ್ಯಾಯರಿಂದ ಅಭ್ಯರ್ಥಿಯ ಜನ್ಮ ದಿನಾಂಕ ಮತ್ತು ಓದುತ್ತಿರುವ ತರಗತಿ ಬಗ್ಗೆ ಪಡೆದ ಪ್ರಮಾಣ ಪತ್ರದ ಮೂಲ ಪ್ರತಿ (ದೃಡೀಕರಿಸಿದ ಅಭ್ಯರ್ಥಿಯ ಭಾವ ಚಿತ್ರದೊಂದಿಗೆ). ಈ ರಾಜ್ಯದ ವಾಸಸ್ಥಾನ ದೃಡೀಕರಣ ಪತ್ರ ತಹಶೀಲ್ದಾರರಿಂದ ಪಡೆದಿರಬೇಕು.ಹೆಚ್ಚಿನ ಮಾಹಿತಿಗಾಗಿ ಜಂಟಿ ನಿರ್ದೇಶಕರು, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಅಥವಾ ದೂ.0836-2440176 ಗೆ ಸಂಪರ್ಕಿಸಬಹುದು ಎಂದು ಧಾರವಾಡ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...