HomeKarnatakaನಿಯಮ ಉಲ್ಲಂಘಿಸಿದ ಕಟ್ಟಡಗಳಿಗೆ ದುಪ್ಪಟ್ಟು ಶುಲ್ಕ ವಿಧಿಸಿ ಎ, ಬಿ ಖಾತಾ ನೀಡಲು ಶೀಘ್ರವೇ ಆದೇಶ

ನಿಯಮ ಉಲ್ಲಂಘಿಸಿದ ಕಟ್ಟಡಗಳಿಗೆ ದುಪ್ಪಟ್ಟು ಶುಲ್ಕ ವಿಧಿಸಿ ಎ, ಬಿ ಖಾತಾ ನೀಡಲು ಶೀಘ್ರವೇ ಆದೇಶ

ಯಾದಗಿರಿ: ಬಿಬಿಎಂಪಿ ವ್ಯಾಪ್ತಿಯಲ್ಲಿ ನೀಡಿರುವ ಮಾದರಿಯಲ್ಲಿಯೇ ರಾಜ್ಯದ ಸ್ಥಳೀಯ ಸಂಸ್ಥೆಗಳಲ್ಲಿ ನಿಯಮ ಉಲ್ಲಂಘಿಸಿದ ಕಟ್ಟಡಗಳಿಗೆ ದುಪ್ಪಟ್ಟು ಶುಲ್ಕ ವಿಧಿಸಿ ಎ ಮತ್ತು ಬಿ ಖಾತಾ ನೀಡಲು ತಿಂಗಳೊಳಗೆ ಆದೇಶ ಹೊರಡಿಸಲಾಗುವುದು ಎಂದು ಪೌರಾಡಳಿತ ಸಚಿವ ರಹೀಂ ಖಾನ್ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಖಾತಾ ನೀಡುವ ವಿಚಾರದಲ್ಲಿ ಸಂಪುಟದ ತೀರ್ಮಾನಕ್ಕೆ ರಾಜ್ಯಪಾಲರ ಅನುಮೋದನೆ ದೊರೆತಿದ್ದು, ಆಕ್ಷೇಪಣೆ ಆಹ್ವಾನಿಸಲಾಗಿದೆ ಎಂದು ಹೇಳಿದ್ದಾರೆ.

ರಾಜ್ಯದಲ್ಲಿ ಸ್ಥಳೀಯ ಸಂಸ್ಥೆಗಳ ಪರವಾನಿಗೆ ಪಡೆದುಕೊಳ್ಳದೆ ನಿರ್ಮಾಣ ಮಾಡಿದ ಗೃಹ ಮತ್ತು ವಾಣಿಜ್ಯ ಕಟ್ಟಡಗಳು ನಗರಸಭೆಯಲ್ಲಿ ನೋಂದಣಿಯಾಗಿಲ್ಲದಿರುವುದರಿಂದ ಶೇಕಡ 50ಕ್ಕೂ ಅಧಿಕ ಪ್ರಮಾಣದಲ್ಲಿ ತೆರಿಗೆ ಸಂಗ್ರಹವಾಗುತ್ತಿಲ್ಲ. 15ನೇ ಹಣಕಾಸು ಯೋಜನೆಯಡಿ ಪ್ರಯೋಜನ ಪಡೆದುಕೊಳ್ಳಲು ಶೇಕಡ 50ಕ್ಕಿಂತ ತೆರಿಗೆ ಸಂಗ್ರಹಿಸಬೇಕಿದೆ. ಈ ನಿಟ್ಟಿನಲ್ಲಿ ಬಿಬಿಎಂಪಿ ಮಾದರಿಯಲ್ಲಿ ಸ್ಥಳೀಯ ಸಂಸ್ಥೆಗಳಲ್ಲಿ ನಿಯಮ ಉಲ್ಲಂಘಿಸಿದ ಕಟ್ಟಡಗಳಿಗೆ ದುಪ್ಪಟ್ಟು ಶುಲ್ಕ ವಿಧಿಸಿ ಎ ಮತ್ತು ಬಿ ಖಾತಾ ನೀಡಲು ತಿಂಗಳೊಳಗೆ ಆದೇಶ ಹೊರಡಿಸಲಾಗುತ್ತದೆ ಎಂದು ಮಾಹಿತಿ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular