ನವದೆಹಲಿ: ಕಾರ್ಮಿಕ ಮಂಡಳಿಯು ಶೀಘ್ರದಲ್ಲೇ ಗಿಗ್ ಕಾರ್ಮಿಕರನ್ನು ಸಾಮಾಜಿಕ ಭದ್ರತೆಯ ಅಡಿಯಲ್ಲಿ ತರಲಿದೆ ಎಂದು ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವ ಡಾ. ಮನ್ಸುಖ್ ಮಾಂಡವಿಯ ಹೇಳಿದ್ದಾರೆ.
ನವದೆಹಲಿಯಲ್ಲಿ ಅನೌಪಚಾರಿಕ ವಲಯದ ಕಾರ್ಮಿಕರಿಗೆ ಔಪಚಾರಿಕೀಕರಣ ಮತ್ತು ಸಾಮಾಜಿಕ ಭದ್ರತಾ ವ್ಯಾಪ್ತಿ ಕುರಿತ ಎರಡು ದಿನಗಳ ಅಂತರರಾಷ್ಟ್ರೀಯ ವಿಚಾರ ಸಂಕಿರಣವನ್ನು ಉದ್ಘಾಟಿಸಿದ ಅವರು ಮಾತನಾಡಿ, ಯಾವುದೇ ರೀತಿಯ ತಾರತಮ್ಯವಿಲ್ಲದೆ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ನೀಡುವುದು ಸರ್ಕಾರದ ಆದ್ಯತೆಯಾಗಿದೆ ಎಂದು ಹೇಳಿದ್ದಾರೆ.
ಸುಮಾರು 60 ಕೋಟಿ ಜನರು ಸರ್ಕಾರದ ಆರೋಗ್ಯ ಭದ್ರತಾ ಯೋಜನೆಗಳ ಅಡಿಯಲ್ಲಿ ಒಳಗೊಳ್ಳಲ್ಪಟ್ಟಿದ್ದಾರೆ ಮತ್ತು ಐದು ಲಕ್ಷ ರೂಪಾಯಿಗಳವರೆಗೆ ಉಚಿತ ವೈದ್ಯಕೀಯ ಚಿಕಿತ್ಸೆಯನ್ನು ಪಡೆಯುತ್ತಾರೆ. ಯಾರೂ ಮೂಲಭೂತ ಆಹಾರದಿಂದ ವಂಚಿತರಾಗದಂತೆ ಜನರಿಗೆ ಸುಮಾರು 5 ಕೆಜಿ ಆಹಾರ ಧಾನ್ಯಗಳನ್ನು ಒದಗಿಸಲಾಗಿದೆ ಎಂದು ಹೇಳಿದ್ದಾರೆ.