alex Certify BREAKING : ದಿನಗೂಲಿ ಕಾರ್ಮಿಕರ ವಿರುದ್ಧ ದೌರ್ಜನ್ಯ ಆರೋಪ : ಶಾಸಕ ಮುನಿರತ್ನ ವಿರುದ್ಧ ಮತ್ತೊಂದು ‘FIR’ ದಾಖಲು.! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ದಿನಗೂಲಿ ಕಾರ್ಮಿಕರ ವಿರುದ್ಧ ದೌರ್ಜನ್ಯ ಆರೋಪ : ಶಾಸಕ ಮುನಿರತ್ನ ವಿರುದ್ಧ ಮತ್ತೊಂದು ‘FIR’ ದಾಖಲು.!

ಬೆಂಗಳೂರು : ದಿನಗೂಲಿ ಕೆಲಸಗಾರರ ವಿರುದ್ಧ ದೌರ್ಜನ್ಯ ಆರೋಪದ ಹಿನ್ನೆಲೆ ಶಾಸಕ ಮುನಿರತ್ನ ವಿರುದ್ಧ ಮತ್ತೊಂದು ಎಫ್ ಐ ಆರ್ ದಾಖಲಾಗಿದೆ.

ಮನೆ ನೆಲಸಮ ಮಾಡಿ ಶಾಸಕ ಮುನಿರತ್ನ ಮತ್ತು ಸಹಚರರು ದರ್ಪ ಮೆರೆದಿದ್ದಾರೆ ಎಂದು ಆರೋಪ ಕೇಳಿಬಂದಿದ್ದು, ಮುನಿರತ್ನ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.

ಪೀಣ್ಯ ಪ್ರಥಮ ದರ್ಜೆ ಕಾಲೇಜು ಬಳಿಯಿರುವ ಅಕ್ಕಮಹಾದೇವಿ ಸ್ಲಂನಲ್ಲಿ ಸುಮಾರು 50 ಕ್ಕೂ ಹೆಚ್ಚು ಕುಟುಂಬಗಳು ವಾಸವಾಗಿವೆ. ಶಾಸಕ ಮುನಿರತ್ನ ಮತ್ತು ಸಹಚರರು ಜೆಸಿಬಿ ತಂದು ಎಲ್ಲರ ಮನೆಯನ್ನು ನೆಲಸಮ ಮಾಡಿದ್ದಾರೆ ಎಂದು ದೂರು ನೀಡಲಾಗಿದೆ.ವಸಂತ್ ಕುಮಾರ್, ಚನ್ನಕೇಶವ, ನವೀನ್, ರಾಮ , ಕಿಟ್ಟಿ , ಗಂಗಾ ಎಂಬುವವರು ಬಂದು ಮನೆ ನೆಲಸಮ ಮಾಡಿಸಿದ್ದಾರೆ. ಮನೆಯಲ್ಲಿ ಕೂಡಿಟಿದ್ದ 20-70 ಸಾವಿರ ಹಣ 30 ಗ್ರಾಂ ಚಿನ್ನಾಭರಣ ಮಣ್ಣು ಪಾಲಾಗಿದೆಯೆಂದು ದೂರಿನಲ್ಲಿ ಉಲ್ಲೇಖಿಸಲಾಗಿ ದೆ.ಆರ್ಎಂಸಿ ಯಾರ್ಡ್ ಪೊಲೀಸ್ ಠಾಣೆಯಲ್ಲಿ ಶಾಸಕ ಮುನಿರತ್ನ ವಿರುದ್ಧ ಎಫ್ಐಆರ್ ದಾಖಲಾಗಿದೆ.

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...